ಬೆಂಗಳೂರು, (ಆ.25): ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನಿಯವರ ರೋಡ್ ಶೋ ಕೊನೆ ಕ್ಷಣದಲ್ಲಿ ರದ್ದು ಮಾಡಲಾಗಿದೆ.
ಚಂದ್ರಯಾನ 3ರ ಯಶಸ್ವಿ ಹಿನ್ನೆಲೆಯಲ್ಲಿ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಪ್ರಧಾನಿ ಮೋದಿ ಅವರು ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
ಈ ವೇಳೆಯಲ್ಲಿ 1ಕಿ.ಮೀ. ದೂರದವರೆಗೆ ಪ್ರಧಾನಿಯವರ ರೋಡ್ ಶೋ ನಡೆಸಲು ಬಿಜೆಪಿ ಸಿದ್ಧತೆ ನಡೆಸಿತ್ತು. ಮೋದಿಯವರ ಸ್ವಾಗತ ಮತ್ತು ರೋಡ್ ಶೋ ವೇಳೆ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದುಕೊಳ್ಳುವಂತೆ ತಿಳಿಸಲಾಗಿತ್ತು. ಅಲ್ಲದೇ ರೋಡ್ ಶೋ ಹಿನ್ನೆಲೆಯಲ್ಲಿ ಬದಲಿ ಮಾರ್ಗ ಬಳಕೆಗೆ ಸೂಚಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರೋಡ್ ಶೋ ರದ್ದಾಗಿದೆ.
ತೆರೆದ ವಾಹನದಲ್ಲಿ ನಡೆಯಲಿದ್ದ ಪ್ರಧಾನಿ ಅವರ ರೋಡ್ ಶೋ ಗೆ ಎಸ್‌ಪಿಜಿ ಯಿಂದ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.
ಹೀಗಾಗಿ ಜಾಲಹಳ್ಳಿ ಸಮೀಪ ಮಾತ್ರ ಪ್ರಧಾನಿ ಮೋದಿ ಅವರು ಕಾರಿನಲ್ಲಿ ಕುಳಿತು ಜನರತ್ತ ಕೈಬೀಸಲಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….