ದೊಡ್ಡಬಳ್ಳಾಪುರ, (ಆ.25): ವರಮಹಾಲಕ್ಷ್ಮೀ ಹಬ್ಬದ ದಿನವೇ ರಸ್ತೆ ಬದಿ ವ್ಯಾಪಾರಿಗಳನ್ನು ತೆರವು ಮಾಡುವ ಮೂಲಕ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಅಪಘಾತ, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದ್ದ ಹಿನ್ನೆಲೆಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.
ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ನರಸಿಂಹಮೂರ್ತಿ, ಅರೋಗ್ಯ ಅಧಿಕಾರಿ ಕೀರ್ತಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳವಾಗಿ, ಸಾವು- ನೋವುಗಳು ತೀವ್ರವಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಅಂಗಡಿಗಳನ್ನು ತೆರವು ಮಾಡಬೇಕೆಂಬ ಒತ್ತಾಯ ತೀವ್ರಗೊಂಡಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣ ಲೋಕಾಯುಕ್ತರಿಗೆ ದೂರು ನೀಡಲು ಮುಂದಾಗಿದೆ.
ಈ ಎಲ್ಲಾ ಕಾರಣಗಳಿಂದ ಎಚ್ಚೆತ್ತ ನಗರಸಭೆ ಅಧಿಕಾರಿಗಳು ನಗರ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದಾರೆ. ಅದರಂತೆಯೇ ಇಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಬ್ಬವೆನ್ನುವುದನ್ನು ನೋಡದೆ ತೆರವು ಕಾರ್ಯಾಚರಣೆ ನಡೆಸಿರುವುದು ಅಚ್ಚರಿಗೆ ಕಾರಣವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….