ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಹಾಸನ, (ಆ.26): ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹಾಸನಕ್ಕೆ ಇಂದು ಭೇಟಿ ನೀಡಿದ್ದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ವಿಜ್ಞಾನಿಗಳ ಅವಿರತ ಶ್ರಮದಿಂದ ದೇಶದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇವತ್ತು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ. ಹೀಗಾಗಿ ರಾಜಕಾರಣ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡಲು ಹೋಗಲ್ಲ. ನೀವು ಸರಕಾರದ ಬಗ್ಗೆ ಕಠಿಣವಾಗಿ ಮಾತನಾಡುವುದು ಬೇಡ, ಇವರು ತಪ್ಪುಗಳನ್ನು ಮಾಡಿಕೊಂಡು ಹೋಗಲಿ ಬಿಟ್ಟು ಬಿಡಿ ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. 

ಹಾಗಂತ ಬಿಟ್ಟುಬಿಟ್ಟರೆ ಇವರಿಗೆ ಹೇಳೋರು ಕೇಳೋರು ಇರುವುದಿಲ್ಲ, ಆ ಪರಿಸ್ಥಿತಿಗೆ ಬಂದು ಬಿಡ್ತಾರೆ. ಈಗಲೇ ಹೇಳೋರು, ಕೇಳೋರು ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಅನಧಿಕೃತವಾಗಿ ಲೋಡ್ ಶೆಡ್ಡಿಂಗ್: ನಾನು ಸರಕಾರಕ್ಕೆ ಹೇಳುವುದು ಇಷ್ಟೇ. ನಿಮ್ಮ‌ ಗ್ಯಾರಂಟಿ ಸ್ಕೀಂಗಳನ್ನು ಮಾಡಿಕೊಂಡು ಹೋಗಿ, ಸಂತೋಷ. ಅದು ಎಷ್ಟರಮಟ್ಟಿಗೆ ನಿಮ್ಮ ಗ್ಯಾರಂಟಿ ಸ್ಕೀಂಗಳಿಂದ ಇಡೀ ನಾಡಿನ ಜನತೆಗೆ ಅನೂಕೂಲ ಆಗುತ್ತಿದೆ ಎಂಬುದನ್ನು ಕಾದು ನೋಡೋಣ. ಅದಾನಿ, ಅಂಬಾನಿಗೆ ಸೇರುವ ದುಡ್ಡನ್ನು ಪ್ರತಿಯೊಬ್ಬರಿಗೂ ಹಂಚುತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದ್ಯಾರಿಗೆ ಹಂಚುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. 

ಗೃಹಜ್ಯೋತಿ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವುದುನ್ನು ಪ್ರತಿನಿತ್ಯ ಕಾಣುತ್ತಿದ್ದೇವೆ. ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿ‌ಜನ ಕಾಯುತ್ತಾ ಕೂರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಸರಕರಾಕ್ಕೆ ಚಾಟಿ ಬೀಸಿದರು.

ಅನಧಿಕೃತ ಲೋಡ್ ಶೆಡ್ಡಿಂಗ್ʼಗೆ ಯಾವುದೇ ರೀತಿಯ ಸಿದ್ದತೆಗಳಿಲ್ಲ, ಮುಂದೆ ಆಗುವ ಸಮಸ್ಯೆಗಳ ಬಗ್ಗೆ ಚಿಂತನೆಯೂ ಇಲ್ಲ. ಮೊದಲು ರೈತರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಯೋಚನೆ ಮಾಡಬೇಕಿತ್ತು ಇವರು. 130 ತಾಲ್ಲೂಕುಗಳಲ್ಲಿ ಬರದ ಛಾಯೆ ಮೂಡಿದೆ ಅಂತ ಕೃಷಿಮಂತ್ರಿಗಳೇ ಹೇಳೀದ್ದಾರೆ. ಭಿತ್ತನೆ ಸಂಪೂರ್ಣ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ಯಾರೆಂಟಿ ಎಂದು ವಿಜೃಂಭಿಸುವುದನ್ನು ಬಿಟ್ಟು ಮೊದಲು ರೈತರ ಬದುಕು ಏನಾಗಿದೆ ಎಂಬುದನ್ನು ನೋಡಲಿ ಎಂದು ಅವರು ಒತ್ತಾಯ ಮಾಡಿದರು.

ಕಾವೇರಿ; ನಮ್ಮ ರೈತರ ಹಿತ ರಕ್ಷಿಸಿ: ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ನಮ್ಮ ರೈತರ ಹಿತ ಕಡೆಗಣಿಸಿದೆ. ಸರ್ವಪಕ್ಷದ ಸಭೆಯಲ್ಲೂ‌ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನು ನೇರವಾಗಿ ಹೇಳಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷದ ಸಭೆ ಕರೆದು ಚರ್ಚೆ ಮಾಡಬೇಕಿತ್ತು. 

ಸುಪ್ರೀಂ ಕೋರ್ಟ್‌ಗೆ ತಮಿಳುನಾಡಿನವರು ಅರ್ಜಿ ಹಾಕಿಕೊಂಡಾಗ ತೀರ್ಪು ಬರುವವರೆಗೂ ಕಾಯಬೇಕಿತ್ತು. ಏಕಾಏಕಿ ನೀರು ಬಿಟ್ಟುಬಿಟ್ಟರು, ನಂತರ ರೈತರು ಪ್ರತಿಭಟನೆ ಮಾಡಲು ಹೋದಾಗ ʼನೀವು ಕೋರ್ಟ್‌ಗೆ ಕೇಸ್ ಹಾಕಿಕೊಳ್ಳಿʼ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಇಂಥ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದು ಸಭೆಯಲ್ಲಿ ನೇರವಾಗಿಯೇ ಹೇಳಿದ್ದೇನೆ ಎಂದರು ಕುಮಾರಸ್ವಾಮಿ ಅವರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!