ದೊಡ್ಡಬಳ್ಳಾಪುರ, (ಆ.26): ರಸ್ತೆಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಕೆಳಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ನಗರದ ಇಸ್ಲಾಂಪುರದಲ್ಲಿ ಸಂಭವಿಸಿದೆ.
ಶನಿವಾರ ರಾತ್ರಿ ಸುಮಾರು 9.45ರ ವೇಳೆಗೆ ನಗರದ ಇಸ್ಲಾಂಪುರದ ಬಳಿ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆ ಕ್ಯಾಂಟರ್ ಬರುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಸುಮಾರು 45 ರಿಂದ 55 ವರ್ಷದ ವ್ಯಕ್ತಿ ಕ್ಯಾಂಟರ್ ಹಿಂದಿನ ಚಕ್ರಕ್ಕೆ ಸಿಗುವಂತೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….