ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು: ಬಸವರಾಜ ಬೊಮ್ಮಾಯಿ‌

ಬೆಂಗಳೂರು, (ಆ.28): ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳಾದ ಹಿನ್ನೆಲೆಯಲ್ಲಿ ಎಕ್ಸ್ (ಈ ಮುಂಚೆ ಟ್ವೀಟ್ ಎನ್ನಲಾಗುತ್ತಿತ್ತು) ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ.

ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರೆಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ. 

ಈ ಮಧ್ಯ ಗ್ಯಾರೆಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ. 

ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಮುಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಕೊಲೆ ಸುಲಿಗೆ ಸಾಮಾನ್ಯವಾಗಿದೆ. 

ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌ ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ. 

ಸರ್ಕಾರದ ವಿರುದ್ದ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ರುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ. ಇದು ಪ್ರಜಾಪ್ರಭುತ್ವ ವಿರೊಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ ಎಂದಿದ್ದಾರೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!