ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಚಾಲನೆ: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, (ಆ.30): ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ.  ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ. ಐದು ಗ್ಯಾರಂಟಿಗಳನ್ನು ನಾವು  ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಎಂದರು.

ನೂರ ದಿನಗಳ ಸಾಧನೆ ಬಿಂಬಿಸುವ ಕಿರುಹೊತ್ತಿಗೆ; ಈ ತಿಂಗಳ 27 ನೇ ತಾರೀಖೆಗೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಜನತೆಯ ಮುಂದೆ ಸರ್ಕಾರದ ಸಾಧನೆಗಳನ್ನು  ತಿಳಿಸಲು ಸಣ್ಣ ಕೈಪಿಡಿ ಹೊರತರಲಾಗಿದೆ. ಈ ಕಿರುಹೊತ್ತಿಗೆ  ಕಳೆದ ಮೂರು ತಿಂಗಳು, 10 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಒಳಗೊಂಡಿದೆ. ಈ ರಾಜ್ಯದ ಜನತೆಗೆ ನಮ್ಮ ಕರ್ತವ್ಯ ಜವಾಬ್ದಾರಿ ಹಾಗೂ ಸಾಧನೆಗಳನ್ನು ಮುಂದಿಡುವ ಪ್ರಯತ್ನ ಮಾಡಿದೆ ಎಂದರು.

ಬೃಹತ್ ಪ್ರಮಾಣದಲ್ಲಿ ಬಡವರಿಗೆ ಹಣ ವರ್ಗಾವಣೆ: ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ  ಯಜಮಾನಿಯಾರಿಗೆ  2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ  1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವ ರಾಜ್ಯವೂ ತೊಂದರೆಯಲ್ಲಿರುವ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಂದರೆ ವರ್ಷಕ್ಕೆ 24 ಸಾವಿರ ಹಣವನ್ನು ಬಡವರಿಗೆ ವರ್ಗಾಯಿಸಿಲ್ಲ ಎನ್ನುವುದು ಕಟುಸತ್ಯ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು,  48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ  ಖಾತೆಗೆ ಜಮಾ ಮಾಡಿದ್ದೇವೆ ಎಂದರು.

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ: ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್‍ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ  ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ.  ಪ್ರಧಾನಿಗಳೇ ಈ 5 ಗ್ಯಾರಂಟಿಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ  ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಯುವನಿಧಿಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಜಾರಿ ಮಾಡಿ, ನೀರಾವರಿ, ಲೋಕೋಪಯೋಗಿ, ವಸತಿ, ಗ್ರಾಮಿಣಾಭಿವೃದ್ಧಿಗೆ ಅನುದಾನವಿಟ್ಟು 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. 56 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ತಗಲುತ್ತದೆ. ನಮ್ಮದು ಬಡವರ , ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ರೈತರ, ಕಾರ್ಮಿಕರ, ಯುವಕರ ಪರವಾದ ಸರ್ಕಾರ ಎಂದು ಸಾಬೀತು ಮಾಡಲಾಗಿದೆ. ಯಾರು ಏನೇ ಹೇಳಿದರೂ ನಾನು ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷದವರು ಹೇಳಿರುವುದು ಸುಳ್ಳು ಎಂದರು. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಮಾತನಾಡಿ, ನಾವು ಯಾವತ್ತೂ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಮ್ಮ ಕೈಯಲ್ಲಿ ಆಗದೇ ಇದ್ದರೆ ಆಗಲ್ಲ ಅಂತಾ ನೇರವಾಗಿ ಹೇಳುತ್ತೇವೆ. ನಮ್ಮ ಕೈಯಲ್ಲಿ ಮಾಡುವ ಕೆಲಸ ಆಗಿದ್ದರೆ ಅದನ್ನು ಖಂಡಿತಾ ಮಾಡುತ್ತೇವೆ. ನಾವು ಯಾವತ್ತೂ ನಿಮಗೆ ಸುಳ್ಳು ಹೇಳುವುದಿಲ್ಲ. ಸುಳ್ಳು ಆಶ್ವಾಸನೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಏಳಿಗೆಗೆ ಮಹಿಳೆಯರು ಮಾತ್ರ ಕಾರಣರು. ರಾಜ್ಯದ ಅಭಿವೃದ್ಧಿ ಆಗಿರೋದು ಮಹಿಳೆಯರಿಂದ. ಗೃಹಲಕ್ಷ್ಮಿ ಯೋಜನೆ ಅದು ಜನರ ಯೋಜನೆ. ಈ ಯೋಜನೆ ರೂಪಿಸಿರುವುದು ಯಾವುದೇ ಥಿಂಕ್ ಟ್ಯಾಂಕರ್ಸ್ ಗಳಲ್ಲ, ಬಂಡವಾಳಶಾಯಿಗಳಲ್ಲ. ನಿಮ್ಮಿಂದಲೇ ನಿಮಗಾಗಿ ರೂಪವಾದ ಯೋಜನೆ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಸಂವಿಧಾನದ ಪೀಠಿಕೆಯನ್ನು ಓದಲಾಯಿತು.

ನೂರು ದಿನಗಳಲ್ಲಿ ಸರ್ಕಾರದ ಸಾಧನೆಯನ್ನು ಬಿಂಬಿಸುವ ಕರ್ನಾಟಕ ಮಾದರಿ ಪುಸಕ್ತವನ್ನು ಬಿಡುಗಡೆ ಮಾಡಲಾಯಿತು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]