ಚಿಕ್ಕಬಳ್ಳಾಪುರ, (ಆ.30): ಕುಟುಂಬದ ವಿರೋಧದ ನಡುವೆಯೂ ತನಗಿಂತ ಎರಡು ವರ್ಷ ಕಿರಿಯವನನ್ನ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.
ಶಿಡ್ಲಘಟ್ಟ ನಗರದ ಮಯೂರ ವೃತ್ತದ ಬಳಿ ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ಸೋಮವಾರ ವಿವಾಹಿತೆ ನಾಗಮಣಿ (23ವರ್ಷ) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಖಾಸಗಿ ಕ್ಲಿನಿಕ್ ಒಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾತವಾರಹೊಸಹಳ್ಳಿ ಗ್ರಾಮದ ನಾಗಮಣಿ, ಕಳೆದ ಒಂದೂವರೆ ವರ್ಷದ ಹಿಂದೆ ಶಿಡ್ಲಘಟ್ಟ ತಾಲ್ಲೂ ಕಿನ ತಾತಹಳ್ಳಿ ಗ್ರಾಮದ ಪವನ್ (21 ವರ್ಷ) ಎಂಬಾತನನ್ನ ಪ್ರೀತಿಸಿ ಮದುವೆಯಾಗಿ ಶಿಡ್ಲಘಟ್ಟ ನಗರದ ಮಯೂರ ವೃತ್ತದ ಬಳಿ ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಇಬ್ಬರ ಮಧ್ಯೆ ಕೌಟುಂಬಿಕ ಕಲಹ ಏರ್ಪಟ್ಟು, ಮಹಿಳೆ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.
ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….