ದೊಡ್ಡಬಳ್ಳಾಪುರ, (ಆ.30): ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ರೂ ನೇರ ಪಾವತಿ ಮಾಡುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ನೀಡಿರುವ ಹಿನ್ನಲೆಯಲ್ಲಿ ತಾಲೂಕಿನ ವಿವಿಧೆಡೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನದ ಉದ್ಘಾಟನೆಯ ನೇರ ಪ್ರಸಾರವನ್ನು ಎಲ್‍ಇಡಿ ಪರದೆಗಳ ಮೂಲಕ ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿತ್ತು.
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಬಸವಣ್ಣ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಸಹಯೋಗದೊಂದಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ನೇರ ಪ್ರಸಾರ ಕಾರ್ಯಕ್ರಮವನ್ನು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ರಘುನಾಥಪುರ ಹಾಗೂ ಬಸವಣ್ಣ ಭವನದಲ್ಲಿ ಟಿವಿ ಹಾಗೂ ಎಲ್ ಡಿ ಪರದೆ ಮೂಲಕ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎನ್.ನರಸಿಂಹ ಮೂರ್ತಿ, ಮುಖಂಡರಾದ ಕೃಷ್ಣಪ್ಪ, ರೇಣುಕಾ ಮುನಿರಾಜು, ರಾಜಣ್ಣ, ಬೋರಲಿಂಗಯ್ಯ, ಸಿಬ್ಬಂದಿಗಳಾದ ವಿ.ಶ್ರೀನಿವಾಸ್, ಉಮಾಶಂಕರ್, ಮೇಘನ, ರಮೇಶ್ ಬಾಬು ಆಶಾಕಾರ್ಯಕರ್ತೆಯರು, ಪಪಂ ಸಿಬ್ಬಂದಿಗಳು, ಸೇರಿದಂತೆ ಸ್ಥಳೀಯರು ಹಾಜರಿದ್ದರು.
ಫೋಟೋ ಕ್ಲಿಕ್ಕಿಸಿ ಸಂಭ್ರಮ: ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕ ಹಿನ್ನಲೆ ತಾಯಂದಿರು ಕಾರ್ಯಕ್ರಮದಲ್ಲಿ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಕಾರ್ಯಕ್ರಮದ ಮುನ್ನ ರಂಗೋಲಿ, ಬಲೂನ್ ಅಲಂಕಾರದೊಂದಿಗೆ ಕಂಗೊಳಿಸುವಂತೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಅನುಷ್ಠಾನದ ಹಿನ್ನಲೆಯಲ್ಲಿ ಗುಂಪು ಫೋಟೋಗಳನ್ನು ತೆಗೆಸಿಕೊಂಡು ಸಂಭ್ರಮಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….