ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರ, (ಸೆ.03): ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕು ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ನಮ್ಮ ನೆಚ್ಚಿನ ನಾಯಕರಾದ ಶ್ರೀ ರಾಹುಲ್‌ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳೂ ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ. 

ಕೇಂದ್ರ ಸರ್ಕಾರದ  ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ  ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ಮೋದಿಯವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ. 

ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ಜಾಣಕಿವುಡಾಗಿದ್ದಾರೆ. ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ.

ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ.

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ. 

ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ ಕೂಡಾ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ. 

ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ? ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು, ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ ಹೇಳಿ ಎಂದು‌ ಪ್ರಶ್ನಿಸಿದ್ದಾರೆ.

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!