ಬೆಂಗಳೂರು, (ಸೆ.04): ದೇಶಾದಲ್ಲಿ ಕರೋನಾ ಹೋಯ್ತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಡೆಂಗ್ಯೂ ಬಂದಿದೆ. ದೇಶಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ರಾಜ್ಯದಲ್ಲೂ ಡೆಂಗ್ಯೂ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಶೇ.22 ರಷ್ಟು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮಲೇರಿಯಾ ಪ್ರಕರಣಗಳು ಸಹ ಏರಿಕೆಯಾಗಿವೆ ಎಂದು ವರದಿಯಾಗಿದೆ.
ಜುಲೈ 1ರಿಂದ ಜುಲೈ 30ರ ವರೆಗೆ ಬೆಂಗಳೂರು ನಗರದಲ್ಲಿ ಬರೋಬ್ಬರಿ 1,649 ಪ್ರಕರಣ ದಾಖಲಾಗಿದೆ. ಆಗಸ್ಟ್ ನಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.
ಪ್ರಸಕ್ತ ವರ್ಷ 5,526 ಪ್ರಕರಣ ದಾಖಲಾಗಿವೆ. ಬೆಂಗಳೂರು ಒಂದರಲ್ಲೇ 2,969 ಜನರಿಗೆ ಡೆಂಗ್ಯೂ ಕಾಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 22ಕ್ಕಿಂತ ಅಧಿಕ ಪ್ರಕರಣ ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಗುಣಲಕ್ಷಣ: ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳಾಗಿವೆ. ಈ ರೀತಿಯಾದ ಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….