ದೊಡ್ಡಬಳ್ಳಾಪುರ, (ಸೆ.04): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವತಿಯಿಂದ 11-14, 11-17 ನೇ ವಯೋ ಮಾನದ ಕುಸ್ತಿಪಂದ್ಯಾವಳಿಯನ್ನು ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಆಫೀಸರ್ಸ ಕ್ಲಬ್‌ನಲ್ಲಿ ಆಯೋಜಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಸಾವಿರಾರು ವರ್ಷಗಳ ಪರಂಪರೆ ಹೊಂದಿ ರುವ ಕುಸ್ತಿ ಕ್ರೀಡೆ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದರು.
ಈ ವೇಳೆ ದೈಹಿಕ ಶಿಕ್ಷಣ ಪರಿವೀಕ್ಷಕ ಸುನೀಲ್ ನಾಯಕ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಬರಗೂರು ಸೇರಿದ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ ತಾಲೂಕಿನ ವಿವಿಧ ಶಾಲೆಗಳ ಸುಮಾರು 200 ಮಕ್ಕಳು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….