ಬೆಂಗಳೂರು, (ಸೆ,04): ಬರಪೀಡಿತ ತಾಲೂಕುಗಳ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿಯ ಜೊತೆಗೆ 5 ಕೆ.ಜಿ.ಗೆ ಹಣ ನೀಡುವ ಬದಲು 10 ಕೆ.ಜಿ. ಅಕ್ಕಿಯನ್ನೇ ವಿತರಿಸುವುದಾಗಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಘೋಷಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳ ಪಟ್ಟಿ ಘೋಷಣೆಯಾಗುತ್ತಿದ್ದಂತೆ 114 ಬರ ಪೀಡಿತ ತಾಲೂಕುಗಳಲ್ಲಿ ಹತ್ತು ಕೆ.ಜಿ. ಅಕ್ಕಿ ಪೂರೈಕೆ ಮಾಡುವುದಾಗಿ ಅವರು ಮಾಹಿತಿ ನೀಡಿದರು.
ರಾಜ್ಯದ ಎಲ್ಲೆಡೆ ಪಡಿತರಿಗೆ ಐದು ಕೆಜಿ ಅಕ್ಕಿಯ ಹಣ ನೀಡಲಾಗುತ್ತಿದೆ. ಆದರೆ ಇನ್ನು ಬರ ಪೀಡಿತ ತಾಲೂಕುಗಳಲ್ಲಿ ಒಟ್ಟು ಹತ್ತು ಕೆ.ಜಿ. ಅಕ್ಕಿ ಪೂರೈಕೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಆಗಸ್ಟ್ ತಿಂಗಳಿನಲ್ಲಿ ಉತ್ತಮ ಮಳೆಯಾಗುತ್ತೆ ಎಂದು ರಾಜ್ಯವೇ ಕಾಯುತ್ತಿತ್ತು. ಆದರೆ ಅಂದುಕೊಂಡಂತೆ ಮಳೆಯಾಗಿಲ್ಲ ಮಳೆ ಅಭಾವದಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪೀಡಿತ ತಾಲೂಕುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….