ಬೆಂಗಳೂರು, (ಸೆ.05): ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಚರ್ಚೆ ಬೆನ್ನಲ್ಲೇ ಖ್ಯಾತ ನಟ ಅಮಿತಾಬ್ ಬಚ್ಚನ್ ಭಾರತ್ ಮಾತಾ ಕಿ ಜೈ ಎಂದು ಎಕ್ಸ್ (ಈ ಮುಂಚೆ ಟ್ವೀಟ್ ಎನ್ನಲಾಗುತ್ತಿತ್ತು) ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಬದಲಾಯಿಸುವ ಚರ್ಚೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ. ಈಗ ಹೆಸರು ಬದಲಾವಣೆಯಿಂದ ಏನೂ ಪ್ರಯೋಜನ ಇಲ್ಲ ಎಂದು ಕೆಲವರು ಹೇಳಿದ್ದಾರೆ. ‘ಇಂಡಿಯಾ ಎಂಬ ಹೆಸರು ಚೆನ್ನಾಗಿದೆ. ಆದರೆ ಭಾರತ್ ಎಂಬುದು ಎಮೋಷನ್’ ಎಂಬ ಅಭಿಪ್ರಾಯ ಕೂಡ ಬಂದಿದೆ.
ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ವಿಚಾರಗಳ ಬಗ್ಗೆ ಅವರು ಆಗಾಗ ಪೋಸ್ಟ್ ಮಾಡುತ್ತಾರೆ. ಈಗ ಅವರು ಮಾಡಿರುವ ಒಂದು ಎಕ್ಸ್ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.
‘ಭಾರತ್ ಮಾತಾ ಕಿ ಜೈ’ ಎಂದು ಎಕ್ಸ್ ಮಾಡಿರುವ ಅಮಿತಾಬ್. ಬೇರೆ ಯಾವುದೇ ಸಂದರ್ಭದಲ್ಲಿ ಅವರು ಈ ರೀತಿ ಪೋಸ್ಟ್ ಮಾಡಿದ್ದರೆ ಅದು ಚರ್ಚೆ ಆಗುತ್ತಿರಲಿಲ್ಲ. ಈಗ ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್’ ಎಂದು ಬದಲಾಯಿಸಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಅಮಿತಾಭ್ ಬಚ್ಚನ್ ಅವರು ‘ಭಾರತ್ ಮಾತಾ ಕಿ ಜೈ’ ಎಂದು ಟ್ವೀಟ್ ಮಾಡಿರುವುದು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….