ದೊಡ್ಡಬಳ್ಳಾಪುರ, (ಸೆ.05): ಇಂದಿನ ಶಿಕ್ಷಕರಿಗೆ ವಿದ್ಯಾರ್ಥಿಗಳ ಮುಂದೆ ನಿಂತು ಪಾಠಮಾಡುವುದು ದೊಡ್ಡ ಸವಾಲಾಗಿದೆ. ಎಲ್ಲಾ ಮಾಹಿತಿಯು ಅಂಗೈಯಲ್ಲೇ ಸಿಗುತ್ತಿದೆ. ಆದರೆ ಇದನ್ನು ಮೀರಿ ಮಕ್ಕಳಿಗೆ ವಿದ್ಯೆ ಕಲಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ತಪಸೀಹಳ್ಳಿಯ ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾನಂದಸ್ವಾಮೀಜಿ ಹೇಳಿದರು.
ಅವರು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತತ್ವಶಾಸ್ತ್ರದಲ್ಲಿ ಪರಿಣತಿಯನ್ನು ಹೊಂದಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಭೆ ಹಾಗೂ ಜ್ಞಾನದಿಂದ ಶಿಕ್ಷಕ ವೃತ್ತಿಯಿಂದ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಹುದ್ದೆಯವರೆಗೂ ಹೋದಂತಹ ಮಹಾನ್ ಸಾಧಕರು. ಜ್ಞಾನವಂತರಿಗೆ ಎಲ್ಲೆಡೆ ಗೌರವ, ಮನ್ನಣೆ ದೊರೆಯುತ್ತದೆ ಎನ್ನುವುದಕ್ಕೆ ರಾಧಾಕೃಷ್ಣನ್ ಅವರು ನಿದರ್ಶನವಾಗಿದ್ದಾರೆ.
ಇವತ್ತಿನ ವೇಗದ ಬದುಕಿನಲ್ಲಿ ಶಿಕ್ಷಕರಿಗೆ ಆಧ್ಯಾತ್ಮವು ಮುಖ್ಯವಾಗಿದೆ. ಮನಸ್ಸಿನ ಏಕಾಗ್ರತೆ, ನಮ್ಮದಿಯ ಬದುಕಿಗೆ ಧ್ಯಾನ ಬಹುಮುಖ್ಯವಾಗಿದೆ. ಧ್ಯಾನ ಯಾವುದೇ ಒಂದು ಧರ್ಮ, ಜಾತಿಗೆ ಸೀಮವಾಗಿಲ್ಲ. ಮನಸ್ಸಿನ ಆರೋಗ್ಯಕ್ಕಾಗಿ ಎಲ್ಲರೂ ಧ್ಯಾನದ ಮೊರೆ ಹೋಗಲೇ ಬೇಕಿದೆ ಎಂದರು.
ಸಮಾರಂಭದಲ್ಲಿ ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ವಿ.ಆಂಜನೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಎಚ್.ಎನ್.ದಾಕ್ಷಾಯಿಣಿ ಮತ್ತಿತರರಿದ್ದರು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….