ಕೌಟುಂಬಿಕ ಕಲಹ: ಪತ್ನಿಯ ಬರ್ಬರ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ..!

ಚಿಕ್ಕಮಗಳೂರು, (ಸೆ.05): ಕೌಟುಂಬಿಕ ಕಲಹಕ್ಕೆ ಬೇಸತ್ತ ಪತಿಯೇ ಪತ್ನಿಯನ್ನು ಬರ್ಬರ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ.

ಶಬೀರ್ ಅಹಮದ್ ಎನ್ನುವವನು ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ, ಈತ ತನ್ನ ಪತ್ನಿ ಶಮಾಬಾನು(34 ವರ್ಷ)ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕಳೆದ ಒಂದು ವರ್ಷದ ಹಿಂದೆ ಶಮಭಾನು ಅವರನ್ನು ಶಬೀರ್ ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದ್ದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!