ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.05): ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. 

ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ ಆದರೆ ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು. 

ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ. 

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಭಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು. 

ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500 ಕ್ಕೂ ಹೆಚ್ವು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು. 

ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜ ಟೀಚರ್, ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಅವರು ತಮ್ಮ ವಿಚಾರ ಮಂಡಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!