ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು; ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ,5): ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ  ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ಇವರು ಸಮಾಜದ, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು ಎಂದು ನುಡಿದರು. 

ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಡ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ವು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು ಎಂದು ಪ್ರಶ್ನಿಸಿದರು. 

ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಈ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. 

ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು ಎಂದರು. 

ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲಾ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ ಎಂದರು. 

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು  ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್: ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳಿಗೆ ಶೇ 80 ರಷ್ಟು ಮಕ್ಕಳು ತಳಸಮುದಾಯದಿಂದ ಬರುತ್ತಾರೆ. ಅವರ ಓದಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿದೆವು. ವಾರಕ್ಕೆರಡು ಮೊಟ್ಟೆ ಕೊಡುವುದನ್ನು sslc ವರೆಗೂ ಮುಂದುವರೆಸಿದೆವು. ಶೂ ಭಾಗ್ಯ ಕಲ್ಪಿಸಿದೆವು ಎಂದು ಮುಖ್ಯಮಂತ್ರಿ ನುಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]