ಇದಾವುದು ಹೊಸ ಧರ್ಮ..? ಸನಾತನ..?: ವಿವಾದದ ಬೆಂಕಿಗೆ ತುಪ್ಪ ಸುರಿದ ನಟ ಕಿಶೋರ್

ಬೆಂಗಳೂರು, (ಸೆ.06): ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗಳು ತೀವ್ರ ವಿವಾದ ಸೃಷ್ಟಿಸಿರುವ ನಡುವೆ, ನಟ ಕಿಶೋರ್ ಅವರು ಸನಾತನದ ಕುರಿತು ಪ್ರಶ್ನೆ ಮಾಡಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಅವರು, “ಇಷ್ಟು ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ? ಸನಾತನ??” ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.

“ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು.

ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ.

ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಯತೆ ಸ್ವಲ್ಪ ಪ್ರಬಲವಾಗಿದ್ದರು, ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ, ಅಸಮಾನತೆಯ ವೈದಿಕ ರಾಜಕೀಯವು ಅಪಹರಣ ಮಾಡಿದ ಸನಾತನವನ್ನು, ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ .” 

“ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್‌ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ.

ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ.

ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ, ವಿಶ್ವಮಾನವರಾಗುವ” ಎಂದು ಕಿಶೋರ್ ಕರೆ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!