ದೊಡ್ಡಬಳ್ಳಾಪುರ, (ಸೆ.07): ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ ರತ್ನ ರಕ್ಷಣಾ ವೇದಿಕೆವತಿಯಿಂದ ನಗರದ ಡಿಕ್ರಾಸ್ ವೃತ್ತದಲ್ಲಿ ರಸ್ತೆ ತಡೆದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಮುಖಂಡರು, ಕರ್ನಾಟಕ ರಾಜ್ಯದಲ್ಲಿ ಬಹುತೇಕ ಬರಗಾಲ ಆವರಿಸಿದ್ದು, ಅದೇ ರೀತಿ ಕಾವೇರಿ ನದಿ ಪ್ರದೇಶದಲ್ಲಿ ಮಳೆ ಕೊರತೆಯಿಂದ ಕೆ.ಆರ್.ಎಸ್ ಡ್ಯಾಂನಲ್ಲಿ ನೀರಿನ ಸಂಗ್ರಹ ಕಡೆಮೆಯಿದ್ದು, ತಜ್ಞರ ಪ್ರಕಾರ ಮಳೆ ಮುನ್ಸೂಚನೆ ಕಡಿಮೆಯಿದ್ದು ಕಾವೇರಿ ನದಿಯ ಅವಲಂಬಿತ ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಆತಂಕದಲಿದ್ದಾರೆ.
ಅಲ್ಲದೆ ಬೆಂಗಳೂರು ಸೇರಿದಂತೆ ಅನೇಕ ನಗರಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಸಂಭವವಿದ್ದರೂ ಸಹ ಕರ್ನಾಟಕ ರಾಜ್ಯ ಸರ್ಕಾರ ತಮಿಳು ನಾಡಿಗೆ ನೀರು ಹರಿಸುತ್ತಿರುವುದು ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಮೋಹನ್, ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಕಾರ್ಯಾಧ್ಯಕ್ಷ ಡಿ.ಎನ್.ಮಂಜುನಾಥ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….