ಶಿವಮೊಗ್ಗ, (ಸೆ.07): ಚುನಾವಣೆಗೋಸ್ಕರ ರಾಮ ಮಂದಿರ ಕಟ್ಟುತ್ತಿಲ್ಲ. ಅನೇಕ ವರ್ಷದ ಹೋರಾಟದ ಫಲದಿಂದ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಪ್ರಪಂಚದಲ್ಲಿ ಭಾರತ ದೇಶ ಏನು ಎಂದು ತೋರಿಸಿದ್ದು ಮೋದಿ ಬಂದ ನಂತರ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಭಾವನಾತ್ಮಕ ವಿಷಯ ತೆಗೆಯುತ್ತಾರೆಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಅವರು ಈ ರೀತಿ ಹೇಳಿದರು.
ಭಾರತ ನಾಮಕರಣ ವಿಚಾರವಾಗಿ ಮಾತನಾಡಿದ ಅವರು, ಭಾರತ ಎಂದು ಕರೆದರೆ ಏನು ತಪ್ಪಿಲ್ಲ. ನಮ್ಮ I.N.D.I.A ಸದಸ್ಯರು ಗಾಬರಿಯಾಗಿದ್ದಾರೆ. ಸಣ್ಣ ಸಣ್ಣ ವಿಚಾರವನ್ನು ರಾಜಕೀಕರಣ ಮಾಡುವ ಕೆಲಸ ಮಾಡುತ್ತಿದ್ದಾರೆ. I.N.D.I.A ರಚನೆಯಾದ ಬಳಿಕ ಎನ್ ಡಿಎ ಏನು ಭಯಗೊಂಡಿಲ್ಲ. ಕಳೆದ ಎರಡು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಮುಂದಿನ ಚುನಾವಣೆಯಲ್ಲೂ ಗೆಲ್ಲುತ್ತೇವೆ ಎಂದರು.
ಸನಾತನ ಧರ್ಮದ ಬಗ್ಗೆ ಉದಯನಿದಿ ಸ್ಟಾಲಿನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅತಿ ಬುದ್ಧಿವಂತರು ಈ ರೀತಿ ಹೇಳಿಕೆ ಕೊಡುತ್ತಾರೆ. ಈ ಬಗ್ಗೆ ಇಡೀ ರಾಷ್ಟದಾದ್ಯಂತ ಚರ್ಚೆಯಾಗುತ್ತಿದೆ. ಸ್ಟಾಲಿನ್ ತಾಯಿ ಪ್ರತಿನಿತ್ಯ ಎರಡು ಹೊತ್ತು ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ದೇವರಲ್ಲಿ ನಂಬಿಕೆ ಇದೆ, ಸನಾತನ ಧರ್ಮ ಒಂದು ನಂಬಿಕೆ. ಇಂತಹ ವಿಷಯಗಳ ಬಗ್ಗೆ ಮಾತನಾಡುವುದೇ ತಪ್ಪು ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….