ವಿಪಕ್ಷಗಳು ತಮ್ಮ ಮೈತ್ರಿಯ ಹೆಸರನ್ನು I.N.D.I.A ದಿಂದ BHARAT ಎಂದು ಬದಲಿಸಿಕೊಳ್ಳಲಿ: ಶಶಿ ತರೂರ್

ನವದೆಹಲಿ, (ಸೆ.07): ವಿರೋಧ ಪಕ್ಷಗಳ ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ I.N.D.I.A ಬಣವು ತನ್ನ ಹೆಸರನ್ನು ‘BHARAT’ ಅಂದರೆ ‘ಉತ್ತಮಗೊಳಿಸುವಿಕೆ, ಸಾಮರಸ್ಯ ಮತ್ತು ಜವಾಬ್ದಾರಿಯುತ ಪ್ರಗತಿಯ ನಾಳೆಗಾಗಿ ಮೈತ್ರಿ’ ಎಂದು ಬದಲಿಸಿಕೊಳ್ಳಲಿ. ಆಗಲಾದರೂ ಆಡಳಿತಾರೂಢ ಬಿಜೆಪಿ ತನ್ನ ದುರಾಸೆಯ ಆಟವನ್ನು ನಿಲ್ಲಿಸಬಹುದು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಸಲಹೆ ನೀಡಿದ್ದಾರೆ.

ಈ ಕುರಿತು ಎಕ್ಸ್ ( ಈ ಮುಂಚೆ ಟ್ವೀಟ್ ಎನ್ನಲಾಗುತ್ತಿತ್ತು) ಮಾಡಿರುವ ಅವರು, ‘ನಾವು ಖಂಡಿತವಾಗಿಯೂ ನಮ್ಮನ್ನು ‘ಉತ್ತಮಗೊಳಿಸುವಿಕೆ, ಸಾಮರಸ್ಯ ಮತ್ತು ಜವಾಬ್ದಾರಿಯುತ ಪ್ರಗತಿಯ ನಾಳೆಗಾಗಿ (BHARAT) ಎಂದು ಕರೆದುಕೊಳ್ಳಬಹುದು. ಆಗ ಬಹುಶಃ ಆಡಳಿತ ಪಕ್ಷವು ಹೆಸರು ಬದಲಾಯಿಸುವ ಈ ದುರಾಸೆಯ ಆಟವನ್ನು ನಿಲ್ಲಿಸಬಹುದು’ ಎಂದಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಿ20 ಶೃಂಗಸಭೆ ನಿಮಿತ್ತ ಸೆಪ್ಟೆಂಬರ್ 9ರಂದು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟಕ್ಕೆಂದು ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದೆ.

ಇದೇ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಶಶಿ ತರೂರ್ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆದ ಮೈತ್ರಿಕೂಟದ ಎರಡನೇ ಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಮಾನ ಮನಸ್ಕ ವಿರೋಧ ಪಕ್ಷಗಳು ತಮ್ಮ ಮೈತ್ರಿಯನ್ನು I.N.D.I.A ಎಂದು ಕರೆದಿವೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯನ್ ಮುಜಾಹಿದ್ದೀನ್ ಮತ್ತು ಈಸ್ಟ್ ಇಂಡಿಯಾ ಕಂಪನಿಯಲ್ಲಿ INDIA ಎಂಬ ಪದಗಳಿವೆ ಎಂದು ಇಂಡಿಯಾ ಒಕ್ಕೂಟವನ್ನು ಗುರಿಯಾಗಿಸಿಕೊಂಡಿದ್ದರು.

ನಂತರ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ತಮ್ಮ ಉತ್ತರಕ್ಕೂ ಮುಂಚಿತವಾಗಿ ವಿಪಕ್ಷಗಳನ್ನು ಗುರಿಯಾಗಿಸಿಕೊಂಡ ಪ್ರಧಾನಿ, ‘ಇದು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವಿನ ಪರಸ್ಪರ ಅಪನಂಬಿಕೆಯ ಪ್ರತಿಬಿಂಬವಾಗಿದೆ. ಈ ಮೂಲಕ ಅವರು ಯಾರು ತಮ್ಮ ಪ್ರಸ್ತಾಪದೊಂದಿಗೆ ಇದ್ದಾರೆ ಮತ್ತು ಇಲ್ಲ ಎಂಬುದನ್ನು ಪರೀಕ್ಷಿಸಲು ಬಯಸುತ್ತಾರೆ’ ಎಂದಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!