ದೊಡ್ಡಬಳ್ಳಾಪುರ: ಸೆ.9ರಿಂದ ರಾಜ್ಯಮಟ್ಟದ ಸಬ್ ಜೂನಿಯರ್ ಯೋಗಾಸನ ಚಾಂಪಿಯನ್‍ಶಿಪ್ / 300 ಯೋಗ ಸ್ಪರ್ಧಿಗಳು ಭಾಗಿ

ದೊಡ್ಡಬಳ್ಳಾಪುರ, (ಸೆ.08): ನಿಸರ್ಗ ಯೋಗ ಕೇಂದ್ರ ಹಾಗೂ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗಾಸನ ಕ್ರೀಡಾ ಸಂಸ್ಥೆ, ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋಟ್ರ್ಸ್ ಅಸೋಸಿಯೇಶನ್  ಸಹಯೋಗದಲ್ಲಿ ಸೆಪ್ಟಂಬರ್ 9 ಮತ್ತು 10ರಂದು ಕರ್ನಾಟಕ ರಾಜ್ಯ ಸಬ್ ಜೂನಿಯರ್ ಯೋಗಾಸನ ಚಾಂಪಿಯನ್‍ಶಿಪ್ 2023ನಗರದ ಹೊರವಲಯದ ಬೆಸೆಂಟ್ ಪಾರ್ಕ್‍ನಲ್ಲಿ  ನಡೆಯಲಿದೆ ಎಂದು ನಿಸರ್ಗ ಯೋಗ ಕೇಂದ್ರದ ಕಾರ್ಯದರ್ಶಿ ಯೋಗ ನಟರಾಜ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಚಾಂಪಿಯನ್ ಶಿಪ್‍ನಲ್ಲಿ ಮೂರು ವಿಭಾಗದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 300 ಯೋಗ ಸ್ಪರ್ಧಿಗಳು, 50 ಮಂದಿ ತೀರ್ಪುಗಾರರು,50 ಮಂದಿ ಅಕಾರಿಗಳು ಸೇರಿದಂತೆ 400 ಮಂದಿ ಆಗಮಿಸುತ್ತಿದ್ದಾರೆ. 

ಈ ಸ್ಪರ್ಧೆಯಲ್ಲಿ ಪ್ರಥಮ,ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರನ್ನು ನವೆಂಬರ್ ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ 48ನೇ ರಾಷ್ಟ್ರೀಯ ಯೋಗಾಸನ ಸ್ಪೋಟ್ರ್ಸ್ ಚಾಂಪಿಯನ್‍ಶಿಪ್‍ಗೆ ಆಯ್ಕೆ ಮಾಡಲಾಗುತ್ತದೆ. 

ಈ ಸ್ಪರ್ಧೆಯು ಯೋಗ ಫೆಡರೇಶನ್ ಆಫ್ ಇಂಡಿಯಾ, ಪಂಚಕುಲ, ಹರಿಯಾಣ ಇವರ ಮಾರ್ಗದರ್ಶನದಲ್ಲಿ ನಡೆಯುತ್ತದೆ ಎಂದರು.

ಉದ್ಘಾಟನಾ ಸಮಾರಂಭ: ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಸೆ.9ರಂದು ಸಂಜೆ 4.30ಕ್ಕೆ ಬೆಸೆಂಟ್ ಪಾರ್ಕ್‍ನಲ್ಲಿ ನಡೆಯಲಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಸಮಾರಂಭ ಉದ್ಘಾಟಿಸಲಿದ್ದಾರೆ. ನಿಸರ್ಗ ಯೋಗ ಕೇಂದ್ರದ ಅಧ್ಯಕ್ಷ ಎಚ್.ಸಿ.ರವೀಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭಾ ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಟಿ.ಎನ್.ಪ್ರಭುದೇವ್, ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋಟ್ರ್ಸ್ ಅಸೋಸಿಯೇಶನ್‍ನ ಗೌ.ಅಧ್ಯಕ್ಷ ಗಂಗಾಧರಪ್ಪ, ಅಧ್ಯಕ್ಷ ಜಿ.ಎನ್.ಕೃಷ್ಣಮೂರ್ತಿ, ಕಾರ್ಯದರ್ಶಿ ಕೆ.ಪ್ರಭು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಂ.ಜಿ.ಅಮರನಾಥ್ ಮೊದಲಾದವರು ಭಾಗವಹಿಸಲಿದ್ದಾರೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!