ಬೆಂಗಳೂರು, (ಸೆ.08): ರಾಜ್ಯದಲ್ಲಿ ಆಪರೇಷನ್ ಹಸ್ತದ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ನಡುವೆ, ಬಿಜೆಪಿಯ ಹಿರಿಯ ನಾಯಕ ದಿ.ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು.
ಅಲ್ಲದೇ, ತೇಜಸ್ವಿನಿ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತೇಜಸ್ವಿನಿ ಅನಂತ್ ಕುಮಾರ್ ಉತ್ತರ ನೀಡಿದ್ದಾರೆ.
ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಾದ್ಯಂತ ಬಿಜೆಪಿ ಪ್ರತಿಭಟನೆ ನಡೇಸುತ್ತಿದೆ. ಈ ಹಿನ್ನೆಲೆ ಎಕ್ಸ್ (ಈ ಮುಂಚೆ ಟ್ವಿಟ್ ಎನ್ನಲಾಗುತ್ತಿತ್ತು) ಮಾಡಿರುವ ತೇಜಸ್ವಿನಿ, “ರಾಜ್ಯಾಂದ್ಯಂತ ನಡೆಯಲಿರುವ ಕಾಂಗ್ರೆಸ್ಸಿನ ದುರಾಡಳಿತದ ವಿರೋಧಿ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸೋಣ. ರೈತರ ಆತ್ಮಹತ್ಯೆಗೆ ಕಾರಣವಾದ, ರಾಜಕೀಯಕ್ಕಾಗಿ ಕಾವೇರಿ ನೀರು ಬಿಡುವ, ರೈತರ ಮಕ್ಕಳ ಧನಸಹಾಯ ಕಿತ್ತುಕೊಂಡಿರುವ, ಹೊಸ ಶಿಕ್ಷಣ ನೀತಿಯನ್ನು ತರದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ ಸರಕಾರಕ್ಕೆ ಧಿಕ್ಕಾರ” ಎಂದು ಬರೆದುಕೊಂಡಿದ್ದಾರೆ.
ಕಳೆದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ,ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ತೇಜಸ್ವಿನಿ ಅನಂತಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ. ಈ ನಡುವೆ ತೇಜಸ್ವಿನಿ ಅನಂತ್ ಕುಮಾರ್ ಸಹ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ತೇಜಸ್ವಿನಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿರುವುದು ಎಲ್ಲರಲ್ಲಿ ಅಚ್ಚರಿಗೆ ಕಾರಣವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….