ದೊಡ್ಡಬಳ್ಳಾಪುರ, (ಸೆ.08): ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣ ಬಳಿ ಸ್ಕೈವಾಕರ್ ನಿರ್ಮಾಣಕ್ಕೆ ಕುರಿತಂತೆ ಸಾರ್ವಜನಿಕರ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದೊಡ್ಡಬಳ್ಳಾಪುರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾಹನ ದಟ್ಟಣೆಯ ಕಾರಣ ರಸ್ತೆ ದಾಟಲು ಪ್ರಯಾಣಿಕರಿಗೆ ಉಂಟಾಗುತ್ತಿರುವ ತೊಂದರೆ ತಪ್ಪಿಸುವಂತೆ ಸುಮಾರು ನೂರು ಮಂದಿ ಸಹಿ ಮಾಡಿ ಪತ್ರವನ್ನು ಬರೆದಿದ್ದು, ಈ ಮನವಿಗೆ ರೈಲ್ವೇ ಅಧಿಕಾರಿಗಳು ಸ್ಪಂದಿಸಿ, ಇಂದು ಪರಿಶೀಲನೆ ನಡೆಸಿದರು ಎನ್ನಲಾಗಿದೆ.
ಇದೇ ವೇಳೆ ನೂತನವಾಗಿ ನಿರ್ಮಿಸಲಾಗುತ್ತಿರುವ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ಸಹ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆದರೆ ಅಧಿಕಾರಿಗಳ ಹೆಸರು ಮತ್ತು ಹುದ್ದೆಯ ಮಾಹಿತಿ ತಿಳಿದು ಬಂದಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….