ಹುಬ್ಬಳ್ಳಿ, (ಸೆ.08): ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಲಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಬ್ಬರು ಅಸಹಾಯಕರು ಒಂದಾಗುತ್ತಿದ್ದಾರೆ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ತನ್ನ ಜೊತೆ ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಇಂದು ಮೈತ್ರಿ ನಾಳೆ ವಿರೋಧ ಎಂದರೆ ಏನರ್ಥವಿದೆ ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆಯೂ ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿತ್ತು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಹೋರಾಡಿದವು. ತಮ್ಮ ಅನುಕೂಲಕ್ಕೆ ತಕ್ಕಂತೆ ಮೈತ್ರಿ ಮಾಡಿಕೊಳ್ಳುವುದು ಮತ್ತೆ ಬೇರಾಗುವುದರಿಂದ ಈ ಪಕ್ಷಗಳು ಜನರ ನಂಬಿಕೆ ಕಳೆದುಕೊಳ್ಳಲಿವೆ ಎಂದರು.
ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ವಿರುದ್ಧ ಅಖಂಡ ಭ್ರಷ್ಟಾಚಾರದ ಆರೋಪ ಮಾಡಿದ್ದ ಬಿಜೆಪಿ ಒಂದು ತಿಂಗಳ ಅವಧಿಯಲ್ಲಿ ಅವರನ್ನು ತಮ್ಮಮೈತ್ರಿ ಸರ್ಕಾರಕ್ಕೆ ಸೇರಿಸಿಕೊಂಡರು. ರಾಜಕೀಯ ಪಕ್ಷಗಳ ನಿರ್ಧಾರ ಗಟ್ಟಿಯಾಗಿರಬೇಕು ಎಂದು ಜಗದೀಶ್ ಶೆಟ್ಟ ಹೇಳಿದ್ದಾರೆ.
ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಲೋಕಸಭಾ ಚುನಾವಣೆಯ ವೇಳೆಗೆ ದೊಡ್ಡಮಟ್ಟದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, ಪಕ್ಷಾಂತರ ಹೆಚ್ಚಾಗಲಿದೆ. ತೆಲಂಗಾಣದಲ್ಲಿ ಎರಡನೇ ಸ್ಥಾನದಲ್ಲಿರುವ ಕಾಂಗ್ರೆಸ್ ಚುನಾವಣೆಯ ವೇಳೆಗೆ ಮೊದಲ ಸ್ಥಾನ ಪಡೆದರೂ ಅಚ್ಚರಿಯಿಲ್ಲ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….