ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, (ಸೆ.9); ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ  ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ: ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು.  ಜನತಾ ದಳ  ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು  ತೋರಿಸಿದ್ದಾರೆ ಎಂದು ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ: ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು: ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ  ಲೋಕಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ: ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ: ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು  ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!