ಗೌರಿಬಿದನೂರು, (ಸೆ.11): ನಗರಸಭೆ ಪರಿಸರ ಇಲಾಖೆ ಎಇಇ ಕೆ.ಜಿ.ಶಿವಶಂಕರ್ ನೇತೃತ್ವದಲ್ಲಿ ಅಧಿಕಾರಿಗಳು ಸೋಮವಾರ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಚೀಲ ಮತ್ತು ಲೋಟಗಳನ್ನು ವಶಪಡಿಸಿಕೊಂಡರು.
ಮರು ಬಳಕೆ ಸಾಧ್ಯವಾಗದಂಥ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ ಬಳಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಸುಮಾರು ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ಅಂದಾಜು 50 ಸಾವಿರ ಮೌಲ್ಯದ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಬಂಧಿಸಿದವರಿಗೆ 13 ಸಾವಿರ ರೂ ದಂಡ ವಿಧಿಸಲಾಗಿದೆ’ ಎಂದು ತಿಳಿದು ಬಂದಿದೆ.
ಈ ವೇಳೆ ಮೇಸ್ತ್ರಿ ನರಸಿಂಹಮೂರ್ತಿ ಮತ್ತಿತರ ಸಿಬ್ಬಂದಿಗಳು ಇದ್ದರು ಎಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….