ಬೆಂ.ಗ್ರಾ.ಜಿಲ್ಲೆ, (ಸೆ.11): ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಆಚರಿಸಲಾಗುತ್ತಿದೆ.
ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದೆ.
ಜಯಂತಿಯ ಪ್ರಯುಕ್ತ ರಾಜ್ಯಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 30ರ ಒಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಇಲ್ಲಿಗೆ ಸಲ್ಲಿಸತಕ್ಕದ್ದು . ನಿಗದಿತ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ:205, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ:080-29787448 ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….