ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ,(ಸೆ.11): 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು‌.

ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ: ಸರ್ವಪಕ್ಷ ಸಭೆಯಲ್ಲಿ ಕಾವೇರಿವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್ ಎಸ್ ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ  ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಮೈಸೂರು, ಬೆಂಗಳೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ನೀರು ನೀತಿಯಂತೆ ಮೊದಲ ಆದ್ಯತೆಯಾಗಿದೆ. ಈ ಮಧ್ಯೆ ರೈತರ ಹಿತ ಕಾಪಾಡಬೇಕು. ಸರ್ವೋಚ್ಛ ನ್ಯಾಯಾಲಯದಲ್ಲಿ ತಮಿಳುನಾಡು ಕೇಸು ದಾಖಲಿಸಿದ್ದು, ರಾಜ್ಯದ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಲಿದೆ. ಯಾವುದೇ ಕಾರಣಕ್ಕೆ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಮಂತ್ರಿಗಳ  ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು , ಭೇಟಿಗೆ ಸಮಯ ನಿಗದಿಪಡಿಸಲಿ ಎಂದು ತಿಳಿಸಿದರು.

ಒಂದು ರಾಷ್ಟ್ರ ,ಒಂದು ಚುನಾವಣೆ ಕಾರ್ಯತ: ಅಸಾಧ್ಯ: ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಯ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ:  ಸಾಧ್ಯವಿಲ್ಲ.  ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವನೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ , ಅಥವಾ  ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ ,  ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.

ಕೋಮುವಾದಿಗಳ ಜೊತೆ ರಾಜಿ ಇಲ್ಲ:  ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ  ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನ ಖಾಸಗಿ ಸಾರಿಗೆಯವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!