ಕೊಲಂಬೊ, (ಸೆ.11): ಮಳೆಯ ಕಾರಣ ಸತತ ಎರಡು ಪಂದ್ಯಗಳ ಮುಂದೂಡಿಕೆ ನಂತರ ಇಂದು ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಭಾರತ ತಂಡ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357ರನ್ ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ 32 ಓವರ್ ನಲ್ಲಿ 128 ರನ್ ಗಳಿಸಿ 228ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದೆ.
ನಾಯಕ ಬಾಬರ್ ಅಜಂ 10 ರನ್ ಗಳಿಸಿದರೆ, ಅಘಾ ಸಲ್ಮಾನ್ ಮತ್ತು ಇಫ್ತಿಕಾರ್ ಅಹ್ಮದ್ ತಲಾ 23 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಟಲಿಲ್ಲ.
128 ರನ್ ಗಳಿಸಿದ್ದ ವೇಳೆ ಫಾಹೀಂ ಅಶ್ರಫ್ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಔಟ್ ಆದರು. ಇದು ಪಾಕಿಸ್ತಾನದ 8ನೇ ವಿಕೆಟ್ ಆಗಿತ್ತು. ಆದರೆ ಆ ಬಳಿಕ ಪಾಕಿಸ್ತಾನದ ಬಾಕಿ ಇಬ್ಬರು ಆಟಗಾರರು ಬ್ಯಾಟಿಂಗ್ ಬರಲಿಲ್ಲ. ನಸೀಮ್ ಶಾ ಮತ್ತು ಹ್ಯಾರಿಸ್ ಗಾಯಗೊಂಡಿದ್ದರಿಂದ ಅವರು ಬ್ಯಾಟಿಂಗ್ ಗೆ ಬರಲಿಲ್ಲ. ಹೀಗಾಗಿ ಪಾಕಿಸ್ತಾನ ತಂಡವನ್ನು ಆಲೌಟ್ ಎಂದು ಘೋಷಿಸಿ ಭಾರತ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.
ಭಾರತದ ಪರ ಕುಲದೀಪ್ ಯಾದವ್ 5 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರೆ, ಜಸ್ ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್ಗೆ 2 ವಿಕೆಟ್ ನಷ್ಟಕ್ಕೆ 356 ರನ್ ಗಳಿಸುವ ಮೂಲಕ ಪಾಕಿಸ್ತಾನ ತಂಡಕ್ಕೆ 357 ರನ್ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿತು.
ಈ ಮೊತ್ತ ಬೆನ್ನಟ್ಟಿದ ಪಾಕಿಸ್ತಾನ ತಂಡ 32 ಓವರ್ಗೆ 128 ರನ್ ಗಳಿಸುವ ಮೂಲಕ 228 ರನ್ ಗಳಿಂದ ಸೋಲನ್ನಪ್ಪಿತು. ಈ ಮೂಲಕ ಭಾರತಕ್ಕೆ ಪಾಕ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….