ದೊಡ್ಡಬಳ್ಳಾಪುರ, (ಸೆ.11): ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ 08 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾಡನೂರು ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದವರು ದೊಡ್ಡಬಳ್ಳಾಪುರ ಸಮೀಪದಲ್ಲಿನ ಫಾರ್ಮ್ ಹೌಸ್ಗೆ ಭೇಟಿ ನೀಡಿ, ಹಿಂತಿರುಗಿ ಕಾರಿನಲ್ಲಿ ತೆರಳುವ ವೇಳೆ ಕಾಡನೂರು ಬಳಿಯ ಆಕಾಶವಾಣಿ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಎಂಟು ಮಂದಿ ತೀವ್ರವಾಗಿ ಗಾಯಗೊಂಡ ಪರಿಣಾಮ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಇನ್ಸ್ಪೆಕ್ಟರ್ ಮುನಿಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….