ಬೆಂಗಳೂರು, (ಸೆ.12): ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ನಾಳೆ (ಸೆ.13) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….