ಶಿವಮೊಗ್ಗ, (ಸೆ.13): ಚೈತ್ರಾ ಕುಂದಾಪುರ ತಪ್ಪು ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಿ, ಅನಗತ್ಯವಾಗಿ ಹಿಂದೂಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಚಿವ ಡಿ. ಸುಧಾಕರ್ ಅವರ ವಿರುದ್ಧ ಎಫ್ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಧಾಕರ್ ಅವರಿಗೆ ಒಂದು ಕಾನೂನು, ಬೇರೆಯವರಿಗೆ ಒಂದು ಕಾನೂನಿನಲ್ಲ ಎಂದು ಹೇಳಿದ್ದಾರೆ.
ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ನಾನು ಕೂಡ ಮಾಧ್ಯಮದಲ್ಲಿ ಗಮನಿಸಿದ್ದೇನೆ. ದಲಿತರಿಗೆ ಅನ್ಯಾಯ ಆಗಬಾರದು, ಪ್ರಕರಣವನ್ನ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಏನು ಪ್ರತಿಕ್ರಿಯಿಸಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಅಂತ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….