ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಸಿಎಂ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

ಬೆಂಗಳೂರು, (ಸೆ.13): ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ. 

ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. 

ಇದುವರೆಗಿನ ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. 

ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. 

ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇತರೆ ಹೈಲೈಟ್ಸ್: ಕಳೆದ 28 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕಾವೇರಿ, ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚಿಸಲಾಗಿತ್ತು. ಇಂದು ಕೇವಲ ಕಾವೇರಿ ನೀರಿನ ವಿಚಾರವಾಗಿ ಸಭೆ ನಡೆಸಿದ್ದೇವೆ.

ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ನೀಡಿ ನಮ್ಮ ವಾದ  ಆಲಿಸಿದ ನಂತರ ಐದು ಸಾವಿರ ಕ್ಯೂಸೆಕ್ಸ್ ಬಿಡಲು ಸೂಚಿಸಿತ್ತು. ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ. ಸಾಮಾನ್ಯ ಮಳೆಯಾದಾಗ ನೀರು ಬಿಡಲು ತಕರಾರಿಲ್ಲ. ಕಳೆದ ವರ್ಷ 667 ಟಿಎಂಸಿ ಬಿಡಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ. 

99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು.

ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಬೇಕಾಗಿದೆ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ. ಅಧಿಕಾರಿಗಳು ರಾಜ್ಯದ ಪರಿಸ್ಥಿತಿ, ವಾಸ್ತವಾಂಶ ತಿಳಿಸಿದರೂ ನೀರು ಬಿಡುವಂತೆ ಸೂಚಿಸಿದ್ದಾರೆ.

ನಮ್ಮ ಮುಂದೆ ಎರಡು ದಾರಿ ಇದೆ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಹಾಕುವುದು ಮೊದಲ ದಾರಿ.  ಎರಡನೇ ಆಯ್ಕೆ ನೀರು ಇಲ್ಲ ನಮ್ಮ ಬಳಿ ಎಂದು ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕು.

ಇಂದು ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ. ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

ನಾವು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕಾಗಿದೆ. 

ರಾಜ್ಯದ ಮುಖ್ಯಮಂತ್ರಿಯಾಗಿ, ನೀರು ಕೊಡುವುದು ಕಷ್ಟವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ.

ರೈತರನ್ನು ಬಲಿಕೊಟ್ಟು ನೀರು ಕೊಡಲಾಗದು. ಈಗ ಸಂಕಷ್ಟದಲ್ಲಿದ್ದೇವೆ ನಾವು. ನಾವೆಲ್ಲರೂ ಒಟ್ಟಿಗೆ ಹೋಗಬೇಕು.

ಈ ಸಂಕಷ್ಟಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ ಎಂದರು.

ಹೀಗಾಗಿ ಎಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನಮ್ಮ ರಾಜಕೀಯ ಒಲವು, ನಿಲುವುಗಳನ್ನು ಬದಿಗಿಟ್ಟು, ರಾಜ್ಯದ ಹಿತಾಸಕ್ತಿಯ ದೃಷ್ಟಿಯಿಂದ ಒಟ್ಟಿಗೆ ಕೆಲಸ ಮಾಡೋಣ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!