ಸಚಿವ ಡಿ.ಸುಧಾಕರ್ ವಿರುದ್ಧ ಜೆಡಿಎಸ್ ಪ್ರತಿಭಟನೆ: ಸಚಿವರ ರಾಜೀನಾಮೆಗೆ ಪಟ್ಟು, ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದ ಹೆಚ್.ಎಂ.ರಮೇಶ್ ಗೌಡ

ಬೆಂಗಳೂರು, (ಸೆ.13): ದಲಿತ ಕುಟುಂಬದ ಭೂಮಿಗೆ ಸಂಬಂಧಪಟ್ಟಂತೆ ದರ್ಪ, ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿ ಅವರೇ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.

ದಲಿತರ ಮೇಲೆ ದೌರ್ಜನ್ಯ ಎಸಗಿರುವ ಸಚಿವರ ವಿರುದ್ಧ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವರ ದೌರ್ಜನ್ಯ ಅಮಾನುಷ: ದಲಿತ ಕುಟುಂಬ ಹಾಗೂ ದಲಿತ ಮಹಿಳೆಯ ಮೇಲೆ ಸಚಿವರು, ಮತ್ತವರ ಬಂಟರು ದೌರ್ಜನ್ಯ ಎಸಗಿರುವುದು ಅಮಾನುಷ. ಇದನ್ನು ಜೆಡಿಎಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದು ಹೆಚ್.ಎಂ.ರಮೇಶ್ ಗೌಡ ಹೇಳಿದರು.

ಸಚಿವ ಡಿ.ಸುಧಾಕರ್ ವರ್ತನೆ ತಪ್ಪು. ಅವರ ಭಾಷೆ ಸರಿ ಇಲ್ಲ. ಮಚ್ಚು ಕೊಡಲಿ ಹಿಡಿದು ಓಡಾಡುತ್ತಿದ್ದೆವು ಎಂದು ಹೇಳಿದರೆ ಅರ್ಥವೇನು? ಸಿಎಂ, ಡಿಸಿಎಂ ಸಚಿವರದ್ದು ತಪ್ಪಿಲ್ಲ ಅಂತಾರೆ. ಸಚಿವರ ಮೇಲೆ ಎಫ್ಐಆರ್ ದಾಖಲೆ ನಂತರ ರಾಜೀನಾಮೆ ನೀಡಬೇಕು. ಸಚಿವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಪಡಿಸಿದರು.

ಬಿಜೆಪಿ ಸರ್ಕಾರ ಇದ್ದಾಗ ಸಚಿವರ ವಿರುದ್ಧ ಎಫ್ ಐಆರ್ ದಾಖಲಾದ ತಕ್ಷಣ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ದಲಿತ, ಅಲ್ಪಸಂಖ್ಯಾತ, ಹಿಂದುಳಿತ ಉದ್ಧಾರಕ್ಕೆ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಇವರು ಹೇಳುತ್ತಿದ್ದಾರೆ. ಪ‍ರಿಶಿಷ್ಟ ಜಾತಿ/ ಪಂಗಡಗಳ ಭೂಮಿ ವರ್ಗಾವಣೆ ನಿಷೇಧ (ಪಿಟಿಸಿಎಲ್‌) ಕಾಯ್ದೆ ಜಾರಿಗೆ ತಂದಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಸಚಿವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸಚಿವರ ಪರ ನಿಂತರೆ ತನಿಖೆಯ ಗತಿ ಏನು? ಎಂದು ರಮೇಶ್ ಗೌಡ ಪ್ರಶ್ನಿಸಿದರು.

ತನಿಖೆಗೆ ಮುನ್ನವೇ ಸರ್ಕಾರ ಸಮರ್ಥನೆಗೆ ಇಳಿಯುವುದು ಸರಿ ಅಲ್ಲ. ಅದು ದಲಿತ ಕುಟುಂಬಕ್ಕೆ ಮಾಡುವ ಅನ್ಯಾಯ. ವಾಸ್ತವ ಸ್ಥಿತಿ ಹೀಗಿದ್ದಾಗ ದಲಿತರ ಮೇಲೆ ದೌರ್ಜನ್ಯ ನಡೆಸಿದ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಲು ಸಾಧ್ಯವಾ? ಎಂದು ಅವರು ಕೇಳಿದರು.

ಸಚಿವರು ರಾಜೀನಾಮೆ ನೀಡದಿದ್ದರೆ ನಾವು ರಾಜ್ಯಪಾಲರಿಗೂ ದೂರು ನೀಡುತ್ತೇವೆ. ಅವರು ರಾಜೀನಾಮೆ ನೀಡುವ ತನಕ ಹೋರಾಟ ಮಾಡುತ್ತೇವೆ. ದಲಿತರಿಗೆ ನ್ಯಾಯ ಕೊಡಿಸಲು ಗೃಹ ಸಚಿವರು ವಿಫಲ ಆಗಿದ್ದಾರೆ. ಅಲ್ಲದೆ, ದಲಿತರ ರಕ್ಷಣೆ ಮಾಡಲಾಗದ ಅದೇ ಸಮುದಾಯದ ಗೃಹ ಸಚಿವ ಪರಮೇಶ್ವರ್ ಅವರೂ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು.

ಸಚಿವ ಡಿ.ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು, ತದ ನಂತರ ಬಿಡುಗಡೆ ಮಾಡಿದರು.

ಜೆಡಿಎಸ್ ನಗರ ಮುಖಂಡರಾದ ನಾರಾಯಣ ಸ್ವಾಮಿ, ಪ್ರವೀಣ ಕುಮಾರ್, ಹರೀಶ್, ರೇವಣ್ಣ, ಚಂದ್ರಶೇಖರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!