ಅವಹೇಳನಾಕಾರಿ ಹೇಳಿಕೆ ಆರೋಪ: ಜಿಲ್ಲಾಧ್ಯಕ್ಷ ಸ್ಥಾನದಿಂದ ಬಿ.ಮುನೇಗೌಡರ ವಜಾ ಗೊಳಿಸುವಂತೆ JDS ಮುಖಂಡರ ಆಗ್ರಹ..!!

ದೊಡ್ಡಬಳ್ಳಾಪುರ, (ಸೆ.15): ಬಿಜೆಪಿ – ಜೆಡಿಎಸ್ ನಡುವೆ ಮೈತ್ರಿ ಕುರಿತಂತೆ ಪಕ್ಷದ ವರಿಷ್ಠರ ನಿಲುವಿನ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಬಿ.ಮುನೇಗೌಡ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಳಿವಿಗಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಅನಾರೋಗ್ಯದ ನಡುವೆಯೂ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಜನರ ಒಳಿತಿಗಾಗಿ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಅನೇಕ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದಾರೆ.

ಕಾಂಗ್ರೆಸ್ – ಜೆಡಿಎಸ್‌ ನಡುವೆ ನಡೆದ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಹಾಜರಿದ್ದ ರಾಷ್ಟ್ರ ಮಟ್ಟದ ಮುಖಂಡರು, ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವಾಗ ಮಾತನಾಡದೆ ಅವಮಾನಿಸಿರುವುದು ಕುಮಾರಸ್ವಾಮಿ ಅವರ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ.

ಪ್ರಸ್ತುತ ಪ್ರಾದೇಶಿಕ ಪಕ್ಷದ ಅಸ್ಥಿತ್ವ, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ, ಬಿಜೆಪಿಯೊಂದಿಗೆ ಹೊಂದಾಣಿಕೆ ಮಾತುಕತೆ ನಡೆದಿದೆ. ಆದರೆ ಈ ನಿಲುವನ್ನು ಕಳೆದ ಹಲವು ವರ್ಷಗಳಿಂದ ಪಕ್ಷದಿಂದ ಅವಕಾಶ ಪಡೆದು, ಬೆಂಗಳೂರು ಗ್ರಾಮಾಂತರ  ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿರುವ ಮುನೇಗೌಡ ಅವರು, ಪಕ್ಷ ಹಾಗೂ ವರಿಷ್ಠರ ವಿರುದ್ಧ ಮತ್ತೆ ಬೇಕಾಬಿಟ್ಟಿಯಾಗಿ ಮಾತನಾಡಿದ್ದಾರೆ.

ಮುನೇಗೌಡರ ಈ ವರ್ತನೆಯಿಂದ ತಾಲೂಕಿನಲ್ಲಿ ಪದೇ ಪದೇ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. 2013ರಲ್ಲಿ ಟಿಕೆಟ್ ದೊರಕದ ವೇಳೆ ಇದೇ ರೀತಿ ಪಕ್ಷ ಹಾಗೂ ವರಿಷ್ಠರ ವಿರುದ್ಧ ಹೀನಾಮಾನವಾಗಿ ಅವಮಾನ ಮಾಡಿದ್ದು, ಮತ್ತೆ ಅದೇ ಚಾಳಿ ಆರಂಭಿಸಿದ್ದಾರೆ. ಪಕ್ಷದ ಮುಖಂಡರು ಆರಂಭಿಕ ಹಂತದಲ್ಲಿಯೇ ಇತ್ತ ಗಮನಹರಿಸಿ ಈ ಕೂಡಲೇ ಪಕ್ಷದಿಂದ ಮುನೇಗೌಡ ಅವರನ್ನು ಉಚ್ಚಾಟನೆ ಮಾಡಬೇಕೆಂದು ಒತ್ತಾಯಿಸಿದರು.

ಜಿಪಂ ಮಾಜಿ ಸದಸ್ಯರಾದ ಹೆಚ್.ಅಪ್ಪಯ್ಯಣ್ಣ, ಎ. ನರಸಿಂಹಯ್ಯ, ಮುಖಂಡರಾದ ರಾ.ಬೈರೇಗೌಡ, ತಾ.ನ‌.ಪ್ರಭುದೇವ್ ಮಾತನಾಡಿ, ಬಿಜೆಪಿ – ಜೆಡಿಎಸ್ ನಡುವಿನ ಮೈತ್ರಿ ಕುರಿತಾದ ಪಕ್ಷದ ವರಿಷ್ಠರ ನಿಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿಸುತ್ತೇವೆ. ಮುನೇಗೌಡ ಅವರಿಗೆ ಪಕ್ಷದ ಎಲ್ಲಾ ಅಧಿಕಾರ ನೀಡಿದರು ಪದೇ ಪದೇ ಪಕ್ಷ ಹಾಗೂ ಪಕ್ಷದ ವರಿಷ್ಠರ ವಿರುದ್ಧ ಹೇಳಿಕೆ ನೀಡುತ್ತಿರುವುದು ಉತ್ತಮ ನಡುವಳಿಕೆಯಲ್ಲ.

ಕಳೆದ 10.12ವರ್ಷದಿಂದ ಜಿಲ್ಲಾ ಅದ್ಯಕ್ಷರಾಗಿದ್ದರು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆಗಿದ್ದವರು ಪತ್ರಿಕೆಯೊಂದರಲ್ಲಿ ವರಿಷ್ಠರ ನಿಲುವನ್ನು ಅಗೌರವವಾಗಿ ಮಾತನಾಡಿರುವುದು ವಿಪರ್ಯಾಸ. ಅಲ್ಲದೆ ಜೆಡಿಎಸ್‌ ಪಕ್ಷ ಸಾಯುತ್ತದೆ ಎಂಬುವ ಮೂಲಕ ಮುನೇಗೌಡ ಅವರಿಗೆ ರಾಜಕೀಯ ಭವಿಷ್ಯ ಇಲ್ಲ ಎಂಬುದು ಬಯಲಾಗಿದೆ.

ಕಳೆದ ಚುನಾವಣೆಯಲ್ಲಿ ಮುನೇಗೌಡ ಅವರಿಗೆ ಬಿದ್ದ ಮತಗಳು, ಪಕ್ಷಕ್ಕೆ ದೊರೆತ ಮತಗಳಾಗಿವೆಯೇ ಹೊರತು ಮುನೇಗೌಡರ ವರ್ಚಿಸ್ಸಿನ ಮತಗಳಲ್ಲ. ಬೇಕಾಬಿಟ್ಟಿ ಹೇಳಿಕೆ ನೀಡಿ ಪಕ್ಷಕ್ಕೆ ಅಗೌರವ ತೋರುವ ಬದಲು ಮುನೇಗೌಡ ಅವರು ದೊಡ್ಡಬಳ್ಳಾಪುರವ ಮರೆತು ಇತರೆ ಕೆಲಸಗಳತ್ತ ಗಮನ ಹರಿಸುವುದು ಒಳಿತು ಎಂದರು.

ಸಾರಥಿ ಸತ್ಯಪ್ರಕಾಶ್ ಮಾತನಾಡಿ, ಪಕ್ಷದ ವರಿಷ್ಠರ ನಿಲುವಿಗೆ ಎಲ್ಲರೂ ಬದ್ದರಾಗಿರಬೇಕು. ಬೇರೆಯವರ ಕುರಿತು ಟೀಕೆ ಮಾಡುವುದಿಲ್ಲ ಅದು ಅವರ ವಯಕ್ತಿಕ ಅಭಿಪ್ರಾಯ, ಆದರೆ ಪಕ್ಷದ ಸಂಘಟನೆಯಲ್ಲಿ ಎಲ್ಲರೂ ಒಟ್ಟಾಗಿ ಸಾಗಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಶ್ವಥ್ ನಾರಾಯಣ್, ಕುಂಟನಹಳ್ಳಿ ಮಂಜುನಾಥ್, ಆನಂದ್, ತಳವಾರ್ ನಾಗರಾಜ್, ಪ್ರವೀಣ್ ಗೌಡ, ಅಶ್ವಥ್ ಸೇರಿದಂತೆ ಅನೇಕರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!