ಬೆಂಗಳೂರು, (ಸೆ.15): ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಬೆನ್ನಲ್ಲೆ ಮಂಡ್ಯದಲ್ಲಿ ಜನವರಿಯಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಂದೂಡಿರುವುದಾಗಿ ಕನ್ನಡಸಾಹಿತ್ಯ ಪರಿಷತ್ತು ತಿಳಿಸಿದೆ. ಪರಿಸ್ಥಿತಿ ಗಮನಿಸಿಫೆಬ್ರವರಿಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ.
ಈಗಾಗಲೆ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಘೋಷಣೆಮಾಡಿದೆ. ಇಂತಹ ಸಂದರ್ಭದಲ್ಲಿ ಕನ್ನಡದ ಅಕ್ಷರಜಾತ್ರೆ ನಡೆಸುವುದು ಸಮರ್ಪಕವಲ್ಲ. ಜತೆಗೆ ಅದ್ದೂರಿಸಮ್ಮೇಳನಗಳಿಗೆ ಕಡಿವಾಣ ಹಾಕಲು ಕಸಾಪ ತಿರ್ಮಾನಿಸಿದೆ.
ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವುದು ಸರಿಯಲ್ಲ ಎಂದು ಸಮ್ಮೇಳನ ಮುಂದೂಡಿ ರುವುದಾಗಿ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಚೆಗಷ್ಟೇ ಮಂಡ್ಯ ಸಾಹಿತ್ಯ ಸಮ್ಮೇಳನಕ್ಕಾಗಿ ಸಲಹೆ ಸೂಚನೆ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕರನ್ನು ಕೋರಿತ್ತು. ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅದರಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳೂ ಬರಗಾಲ ಪೀಡಿತ ಪಟ್ಟಿಯಲ್ಲಿವೆ.
ಬುಧವಾರವಷ್ಟೇ ಹಂಪಿ ಉತ್ಸವನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ತಿರ್ಮಾನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತದೆ. ಫೆಬ್ರವರಿ ವೇಳೆಗೆ ಪರಿಸ್ಥಿತಿ ಗಮನಿಸಿ ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸರ್ಕಾರವೂ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….