ಈ ದಿನದ ವಿಶೇಷ: ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನ (ಇಂಜನಿಯರ್‌ಗಳ ದಿನ)

ಭಾರತ ರತ್ನ ಸರ್​ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್​ ಡೇ’ ಆಗಿ ಆಚರಿಸಲಾಗುತ್ತದೆ. 

15ನೇ ಸೆಪ್ಟೆಂಬರ್ 1861ರಂದು ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಂದಿಬೆಟ್ಟದ ಬುಡದಲ್ಲಿರುವ ಮುದ್ದೇನಹಳ್ಳಿಯಲ್ಲಿ 15ನೇ ಸೆಪ್ಟೆಂಬರ್ 1861ರಂದು ಜನಿಸಿದ ವಿಶ್ವೇಶ್ವರಯ್ಯ ಬಾಲ್ಯದಲ್ಲಿ ತೀವ್ರ ಬಡತನ ಎದುರಿಸಿದರು. ಛಲದಿಂದ ಓದಿದ ಅವರು ಪುಣೆಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದರು. ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗಳು ಅವರ ಆಸಕ್ತಿಯ ಕ್ಷೇತ್ರಗಳಾಗಿದ್ದವು.

ವಿಶ್ವೇಶ್ವರಯ್ಯನವರು ಭಾರತದ ಮೊದಲ ಸಿವಿಲ್ ಎಂಜಿನಿಯರ್. ಮೈಸೂರು ಸಂಸ್ಥಾನದ ದಿವಾನರಾಗಿ ಅವರು ನೀಡಿದ ಹಲವು ಕೊಡುಗೆಗಳಿಂದ ಕರ್ನಾಟಕ ಇಂದಿಗೂ ಲಾಭ ಪಡೆದುಕೊಳ್ಳುತ್ತಿದೆ. 101 ವರ್ಷದ ತುಂಬು ಜೀವನ ನಡೆಸಿದ ವಿಶ್ವೇಶ್ವರಯ್ಯನವರು 14ನೇ ಏಪ್ರಿಲ್ 1962ರಂದು ನಿಧನರಾದರು. 

ಸೆಪ್ಟೆಂಬರ್ 15, 1968ರಿಂದ ಪ್ರತಿ ವರ್ಷ ಭಾರತದಲ್ಲಿ ವಿಶ್ವೇಶ್ವರಯ್ಯನವರ ಗೌರವಾರ್ಥ ಎಂಜಿನಿಯರ್ಸ್​ ಡೇ ಆಚರಿಸಲಾಗುತ್ತಿದೆ. ಈ ಮೂಲಕ ವಿಶ್ವೇಶ್ವರಯ್ಯನವರ ಜೀವನ ಮತ್ತು ಸಾಧನೆಯನ್ನು ಸರ್ಕಾರ, ಸರ್ಕಾರಿ ಸಂಸ್ಥೆಗಳು, ಎಂಜಿನಿಯರ್​ ಸಂಘಗಳು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ನೆನಪಿಸಿಕೊಳ್ಳುತ್ತಾರೆ.

ಇಂಜಿನಿಯರಿಂಗ್ ಕ್ಷೇತ್ರ ಮತ್ತು ರಾಷ್ಟ್ರನಿರ್ಮಾಣದ ಕಾರ್ಯದಲ್ಲಿ ಡಾ.ಸರ್ ಎಂ.ವಿಶ್ವೇಶ್ವರಯ್ಯನವರ ಸಾಧನೆಯನ್ನು ಶ್ಲಾಘಿಸಲು ಹಾಗೂ ದೇಶದ ಅಭಿವೃದ್ಧಿಯ ಕಾರ್ಯದಲ್ಲಿ ಇಂಜಿನಿಯರ್​​ಗಳ ಕೊಡುಗೆಯನ್ನು ಗೌರವಿಸಲು ಭಾರತದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 15ರಂದು ರಾಷ್ಟ್ರೀಯ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತೆ.

ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿಯ ಕಾರ್ಯದಲ್ಲಿ ಇಂಜಿನಿಯರ್​​ಗಳ ಕೊಡುಗೆ ಮಹತ್ವದ್ದಾಗಿದೆ. ಇಂಜಿನಿಯರ್​​ಗಳನ್ನು ಆಧುನಿಕ ಸಮಾಜದ ಬೆನ್ನೆಲುಬು ಎಂದು ಕರೆಯಲಾಗುತ್ತದೆ. 

ರಸ್ತೆಗಳು, ಸೇತುವೆಗಳು, ಕಟ್ಟಡ ನಿರ್ಮಾಣ ಕಾರ್ಯಗಳಿಂದ ಹಿಡಿದು ವಿವಿಧ ಯಂತ್ರೋಪಕರಣಗಳನ್ನು ರೂಪಿಸುವವರೆಗೆ ನಾವು ಅವಲಂಬಿಸಿರುವ ಪ್ರತಿಯೊಂದು ಮೂಲಸೌಕರ್ಯವನ್ನು ವಿನ್ಯಾಸಗೊಳಿಸುವಲ್ಲಿ ಇಂಜಿನಿಯರ್​​ಗಳು ಮಹತ್ವದ ಪಾತ್ರವನ್ನು ವಹಿಸುತ್ತಾರೆ.

ಒಬ್ಬ ಶ್ರೇಷ್ಠ ಇಂಜಿನಿಯರ್ ಎಂದಾಗ ನಮಗೆ ಮೊದಲಿಗೆ ನೆನಪಿಗೆ ಬರುವಂತಹದ್ದೇ ಸರ್. ಎಂ.ವಿಶ್ವೇಶ್ವರಯ್ಯನವರು. ಆಧುನಿಕ ಮೈಸೂರಿನ ಪಿತಾಹಮ ಎಂದು ಕರೆಯಲ್ಪಡುವ ಇವರು ಒಬ್ಬ ಇಂಜಿನಿಯರ್ ಆಗಿ ರಾಷ್ಟ್ರ ನಿರ್ಮಾಣದ ಅಭಿವೃದ್ಧಿಯ ಕಾರ್ಯದಲ್ಲಿ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. 

ಹೈದರಾಬಾದ್​​​ನಲ್ಲಿ ಪ್ರವಾಹ ನಿಯಂತ್ರಣ ವ್ಯವಸ್ಥೆ, ಮೈಸೂರಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟು ಮುಂತಾದ ಸಾಮಾನ್ಯ ಜನರಿಗೆ ಉಪಯುಕ್ತವಾಗುವಂತಹ ಕಾರ್ಯಗಳಿಂದ ಹಿಡಿದು, ಮೈಸೂರು ಸೋಪ್ ಫ್ಯಾಕ್ಟರಿ, ಉಕ್ಕಿನ ಕಾರ್ಖಾನೆ, ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. 

ಹಾಗಾಗಿ ಇಂಜಿನಿಯರಿಂಗ್ ಕ್ಷೇತ್ರ, ಶಿಕ್ಷಣ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕಾರ್ಯದಲ್ಲಿ ಸರ್ ಎಂ.ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಶ್ಲಾಘಿಸಲು ಪ್ರತಿವರ್ಷ ಸೆಪ್ಟೆಂಬರ್ 15 ಅಂದರೆ ವಿಶ್ವೇಶ್ವರಯ್ಯನವರ ಜನ್ಮ ದಿನದಂದು ಭಾರತದಲ್ಲಿ ರಾಷ್ಟ್ರೀಯ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!