ಬೆಂಗಳೂರು, (ಸೆ.16): ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯೋ ತಮಿಳುನಾಡಿನ ಮುಖ್ಯಮಂತ್ರಿಯೋ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ರೈತರು ಕುಡಿಯಲು ನೀರು ಇಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಡಿಯಾ ಒಕ್ಕೂಟವನ್ನು ಓಲೈಸಲು ತಮಿಳುನಾಡಿಗೆ 5,000 ಕ್ಯೂಸಿಕ್ ಕಾವೇರಿ ನೀರನ್ನು ಬಿಡುತ್ತಿದ್ದಾರೆ. ಈ ಮೂಲಕ ನಮ್ಮ ರಾಜ್ಯವನ್ನು ಕಡೆಗಣಿಸಿ ಪರೋಕ್ಷವಾಗಿ ತಮಿಳುನಾಡನ್ನು ಕಾಂಗ್ರೆಸ್ ಸರ್ಕಾರ ಬೆಂಬಲಿಸುತ್ತಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೊದಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಿತ್ತು. ತಮಿಳುನಾಡನ್ನು ತೃಪ್ತಿಪಡಿಸಲು ಈ ರೀತಿ ನೀರು ಬಿಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ.
ತಮಿಳುನಾಡನ್ನು ಖುಷಿ ಪಡಿಸಲು ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡುತ್ತಿದೆ. ಆದರೆ ನಮ್ಮಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಂಡು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಬೇಕು ಎಂದು ಒತ್ತಾಯಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….