ಬೆಂಗಳೂರು, (ಸೆ.16): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ವಂಚಿಸಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ನನಗೆ ಆಕೆಯ ಪರಿಚಯವೇ ಇಲ್ಲ ಎಂದಿದ್ದಾರೆ.
ಚೈತ್ರಾಳ ಆಡಿಯೋ ಒಂದರಲ್ಲಿ ಸುನಿಲ್ ಕುಮಾರ್ ಹೆಸರು ಪ್ರಸ್ತಾಪವಾಗಿದೆ ಎಂಬ ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರೂ ಯಾರಿಗೂ ವಂಚನೆ ಮಾಡಬಾರದು, ಪ್ರಕರಣದಲ್ಲಿ ಬಂಧಿತರಾಗಿರುವವರನ್ನು ನಾನು ಯಾವತ್ತೂ ಭೇಟಿಯಾಗಿಲ್ಲ, ಫೋನ್ನಲ್ಲೂ ಮತಾಡಿಲ್ಲ ಎಂದು ಹೇಳಿದ್ದಾರೆ.
ಆಕಸ್ಮಿಕವಾಗಿ ಯಾವುದೋ ಕಾರ್ಯಕ್ರಮಗಳಲ್ಲಿ ಕೂಡಾ ನಾನು ಭೇಟಿಯಾಗಿಲ್ಲ, ಮುಖ್ಯವಾಗಿ ಬಿಜೆಪಿಯಲ್ಲಿ ಹಣದಿಂದ ಟಿಕೆಟ್ ಪಡೆಯಬಹುದು ಎನ್ನುವುದೇ ಒಂದು ಭ್ರಮೆ. ಹಣದಿಂದ ಟಿಕೆಟ್ ಸಿಗುವುದಿದ್ದರೆ, ನಾನು ನಾಲ್ಕು ಬಾರಿ ಶಾಸಕನಾಗಿರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
ರಾಜಕಾರಣಿ, ಪಕ್ಷದ ಹೆಸರು ಹೇಳಿ ಹಣ ದುರುಪಯೋಗ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇದರ ಹಿಂದೆ ಇರುವವರೆಲ್ಲರನ್ನೂ ಮಟ್ಟ ಹಾಕಬೇಕು ಎಂದು ಅವರು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….