ದೊಡ್ಡಬಳ್ಳಾಪುರ, (ಸೆ16): ಡಿಶ್ ಆಂಟೆನಾ ದುರಸ್ತಿಗೆಂದು ತೆರಳಿದ್ದ ಯುವಕನೋರ್ವ ಹೈಟೆನ್ಶನ್ ವೈರ್ ತಗುಲಿ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ಸಂಭವಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಯುವಕನನ್ನು ತಿಮ್ಮಸಂದ್ರ ನಿವಾಸಿ ಜೈಯಕುಮಾರ್ (26 ವರ್ಷ) ಎಂದು ಗುರುತಿಸಲಾಗಿದ್ದು, ಬಸವೇಶ್ವರ ನಗರದ ಮನೆಯೊಂದರ ಮೇಲೆ ಡಿಶ್ ಆಂಟೆನಾ ದುರಸ್ತಿ ಮಾಡಲು ತೆರಳಿದ್ದ ವೇಳೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅನಧಿಕೃತವಾಗಿ ಹೈಟೆನ್ಶನ್ ವೈರ್ ಕೆಳ ಭಾಗದಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಪೊಲೀಸರು ಬೆಸ್ಕಾ ಇಲಾಖೆಗೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….