ಕಾವೇರಿ ನೀರು: ಯಡಿಯೂರಪ್ಪರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ

ಕಲಬುರಗಿ, (ಸೆ.17): ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅವರು ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದರು. 

ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ. ಕುಡಿಯುವ ನೀರಿಗೆ 30 ಟಿಎಂಸಿ, ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಗತ್ಯ. ಒಟ್ಟು 106 ಟಿಎಂಸಿ ನಮಗೆ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ ನೀರು. ನೀರು ಕೊಡಲು ನಮ್ಮ ಬಳಿ ನೀರಿಲ್ಲ. ಕಾವೇರಿ ನೀರನ್ನು ತಮಿಳುನಾಡಿಗೆ ಯಡಿಯೂರಪ್ಪ ಅವರ ಕಾಲದಲ್ಲಿ ಹಾಗೂ ಎಲ್ಲರ ಕಾಲದಲ್ಲಿ ಬಿಡಲಾಗಿದೆ. 

ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಬಿಡಲಾಗುತ್ತದೆ. ಈವರೆಗೆ 37.7  ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವು ಬಿಡಬೇಕಿದ್ದುದ್ದು 99 ಟಿಎಂಸಿ ನೀರು. ಎಲ್ಲಿ ನೀರು ಬಿಟ್ಟಿದ್ದೇವೆ ಎಂದು ಮರು ಪ್ರಶ್ನಿಸಿದರು. 

ಕಾವೇರಿ ನೀರು ನಿಯಂತ್ರಣ ಸಮಿತಿ 5000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸೂಚಿಸಿದೆ. ಅಷ್ಟು ನೀರು ಇಲ್ಲದಿರುವುದರಿಂದ ನಾವು ನೀರು ಬಿಟ್ಟಿಲ್ಲ ಎಂದರು.

ಇಂಡಿಯಾ ಯಾವ ಧರ್ಮದ ವಿರುದ್ಧವೂ ಇಲ್ಲ: ಇಂಡಿಯಾ ಒಕ್ಕೂಟ ಸನಾತನ ಧರ್ಮದ ವಿರುದ್ಧವಿದೆ ಎಂದು ಬಿಜೆಪಿಯ ಹೇಳಿಕೆ ಬಗ್ಗೆ ಮಾತನಾಡಿ ನಾವು ಯಾವ ಧರ್ಮದ ವಿರುದ್ದ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು, ಧರ್ಮಕ್ಕಾಗಿ ಜನ ಅಲ್ಲ ಎಂದರು. ಧರ್ಮ ಮನುಷ್ಯನ ಒಳಿತಿಗಾಗಿ ಇದೆ.  ದಯೆಯೇ ಧರ್ಮದ ಮೂಲ. ದಯೆ ಇಲ್ಲದ ಧರ್ಮ ಯಾವುದಯ್ಯಾ ಎಂದು ಬಸವಾದಿ ಶರಣರು ಹೇಳಿದ್ದಾರೆ. ಧರ್ಮದಲ್ಲಿ ದಯೆ, ಕರುಣೆ, ಮನುಷ್ಯತ್ವ ಇರಬೇಕು ಎಂದರು.

ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ಇನ್ನೂ ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿಯೇ ಇದೆ ಎಂದು  ಪಾದಯಾತ್ರೆ ಮಾಡುವ  ಬಗ್ಗೆ ಪ್ರತಿಕ್ರಿಯೆ ನೀಡಿ, 5 ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ ಎಂದು ಪ್ರಶ್ನಿಸಿದರು. ಯಾವ ಸರ್ಕಾರ 1.13 ಕೋಟಿ ಜನರಿಗೆ 2000 ರೂ.ಗಳನ್ನು ನೀಡಿದೆ? ಯಡಿಯೂರಪ್ಪ ಅವರು 10  ಕೆಜಿಯಲ್ಲಿ ಒಂದು ಕಳು ಕಡಿಮೆಯಾದರೂ ಪ್ರತಿಭಟಿಸುವುದಾಗಿ ಹೇಳಿದ್ದರು, ಮಾಡಿದರೇ ? ಎಂದರು. ಅವರ ಕಾಲದಲ್ಲಿ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 5  ಕೆಜಿಗೆ ಇಳಿಸಿದರು. ಅಲ್ಲೇ  ಗಿರಕಿ ಹೊಡೆಯುತ್ತಿದ್ದಾರೆ. ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಪಾದಯಾತ್ರೆ ಮಾಡುತ್ತಿದ್ದಾರೆಯೇ  ಎಂದು ವ್ಯಂಗವಾಡಿದರು. 600 ಭಾರವಸೆ ನೀಡಿ ಶೇ 10 ರಷ್ಟನ್ನೂ ಜಾರಿಗೆ ತರಲಿಲ್ಲ. ಅವರಿಗೆ ಯಾವ ನೈತಿಕ ಹಕ್ಕಿದೆ ಎಂದರು.

ಸಾಲಮನ್ನಾ ಮಾಡ್ತೀವಿ ಅಂದರು ಮಾಡಲಿಲ್ಲ. ನೀರಾವರಿಗೆ 1 ಲಕ್ಷ ಕೋಟಿ ನೀಡುವುದಾಗಿ ಹೇಳಿದರು. ನೀಡಲಿಲ್ಲ, ಯಾವುದನ್ನೂ ನೀಡಿಲ್ಲ ಎಂದರು. 

ಮೂರು ಡಿಸಿಎಂ ಪಕ್ಷದ ವರಿಷ್ಠರ ತೀರ್ಮಾನ ಅಂತಿಮ: ಮೂವರು ಡಿಸಿಎಂ ಮಾಡುವ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿರುವ ಬಗೆ ಪ್ರತಿಕ್ರಿಯೆ ನೀಡಿ, ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. ಈಗ ಒಬ್ಬರನ್ನು ಮಾಡಿದ್ದಾರೆ. ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ, ಮಾತನಾಡಲಿ. ಹೈ ಕಮಾಂಡ್ ನಿರ್ಧಾರವನ್ನು ಪಾಲಿಸುವುದಾಗಿ ಹೇಳಿದರು. 

ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ನಿಯೋಗ: ಕೃಷ್ಣ ಮೇಲ್ದಂಡೆ ಯೋಜನೆ ವಿಚಾರ  ನ್ಯಾಯಾಲಯದಲ್ಲಿದ್ದು, ಆಂಧ್ರ , ತೆಲಂಗಾಣ ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯೇ ಹೊರಡಿಸಿಲ್ಲ. ಮಹದಾಯಿ ಯೋಜನೆಯಲ್ಲಿ ಗೆಜೆಟ್ ಅಧಿಸೂಚನೆ ಆಗಿದೆ. ಆದರೆ ಅರಣ್ಯ ಹಾಗೂ ಪರಿಸರ ತೀರುವಳಿ ನೀಡಿಲ್ಲ. ನಾಳೆ ಕೊಟ್ಟರೆ, ನಾಡಿದ್ದೇ ಕೆಲಸ ಶುರು ಮಾಡುತ್ತೇವೆ ಎಂದರು. ಅದಕ್ಕಾಗಿಯೇ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಯೋಜನೆಗಳ ಬಗ್ಗೆ ಸರ್ವಪಕ್ಷ ನಿಯೋಗ ತೆರಳಲು ದಿನಾಂಕ ನಿಗದಿಯಾಗುತ್ತಿಲ್ಲ. ಬಿಜೆಪಿ ಯವರೇ 25 ಸಂಸದರಿದ್ದಾರೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!