ಬೆಂ.ಗ್ರಾ.ಜಿಲ್ಲೆ, (ಸೆ.17): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಒಳಾಂಗಣದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ”ಯನ್ನು ಆಚರಿಸಲಾಯಿತು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಡಿ.ಎಂ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ.ಕೃಷ್ಣಪ್ಪ, ವಿಶ್ವಕರ್ಮ ಸಂಘದ ತಾಲ್ಲೂಕು ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….