ಕೋಲಾರ, (ಸೆ.17): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಕುಡಿಯುವ ನೀರಿಗೆ ಹಾಹಾಕಾರ ಇದ್ರು ಸಹ ಈ ಸರ್ಕಾರ ಮಾತ್ರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಕೋಲಾರದ ಕುರುಡುಮಲೆ ವಿನಾಯಕ ದೇವಾಲಯದಲ್ಲಿ ಬಿಜೆಪಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟೆಲ್ಲ ಸಮಸ್ಯೆಗಳು ಇದ್ದರು ಸಹ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಇದರ ವಿರುದ್ಧ ಬಿಜೆಪಿ ಹೋರಾಟವನ್ನು ನಡೆಸಲಿದೆ ಎಂದರು.
ಇವತ್ತು ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಈ ಸರ್ಕಾರ ಜನರ ಹಿತವನ್ನು ಸಂಪೂರ್ಣ ಮರೆತು ಕುಂಭಕರ್ಣ ರೀತಿಯಲ್ಲಿ ನಿದ್ದೆಮಾಡುತ್ತಿದೆ, ಈ ಸರ್ಕಾರವನ್ನು ಎಚ್ಚರಿಸಬೇಕಾಗಿದೆ, ಗಣೇಶ ಹಬ್ಬದ ಬಳಿಕ ರಾಜ್ಯದ ಎಲ್ಲಾ ಮುಖಂಡರ ಜೊತೆ ಪ್ರತಿ ಜಿಲ್ಲೆಗೆ ಪ್ರವಾಸ ಮಾಡಿ ಪಕ್ಷವನ್ನು ಬಲ ಪಡಿಸಿ ಸರ್ಕಾರದ ವೈಪಲ್ಯವನ್ನು ಜನರಿಗೆ ಮನವರಿಕೆ ಮಾಡುವಂತಹ ಕೆಲಸ ಮಾಡುತ್ತಿರುವುದಾಗಿ ಹೇಳಿದರು.
ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ, ಅವರು ಮತ್ತೊಮ್ಮೆ ಭಾರತದ ಪ್ರಧಾನ ಮಂತ್ರಿ ಆಗಲು ದೇವರಲ್ಲಿ ಪ್ರಾಥನೆ ಮಾಡುತ್ತೆನೆ ಈ ದಿನ ಮುಖಂಡರ ಜೊತೆ ಕುರುಡುಮಲೆ ಗಣಪತಿ ದೇವರ ದರ್ಶನವನ್ನು ಪೂಜೆ ನೆರವೇರಿಸಿ ಮೋದಿಯವರು ಮತ್ತಷ್ಟು ಬಲಿಷ್ಟವಾಗಲು ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು.
ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ತಾತ್ಕಾಲಿಕ ರಾಜ್ಯದಲ್ಲಿ ಅಭಿವೃದ್ಧಿ ಬಹಳ ಮುಖ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರು ತಲೆಕೆಡಿಸಿಕೊಳ್ಳೋದಿಲ್ಲ ರಾಜ್ಯದಲ್ಲಿ ಒಂದು ಕೀಲೋಮೀಟರ್ ಸಹ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ಅರೋಪಿಸಿದರು.
ಗ್ಯಾರಂಟಿ ಯೋಜನೆಗಳನ್ನು ಜನರು ಮರೆತಿದ್ದಾರೆ, ಸರ್ಕಾರ ಕಾವೇರಿ ನೀರಿನ ಬಗ್ಗೆ ಯೋಚನೆ ಮಾಡುತ್ತಿಲ್ಲ ಕದ್ದುಮುಚ್ಚಿ ತಮಿಳುನಾಡಿಗೆ ನೀರನ್ನು ಬಿಡಲಾಗುತ್ತಿದೆ ಕನ್ನಂಬಾಡಿ ಕಟ್ಟೆ ಖಾಲಿ ಅದ್ರೂ ನೀರನ್ನು ಹರಿಸುತ್ತಿದ್ದಾರೆ ಇದನ್ನು ಖಂಡಿಸುತ್ತೆನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಎಸ್‌ವೈ ವಾಗ್ದಾಳಿ ನಡೆಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….