ಕಾವೇರಿ ವಿವಾದ: ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣ – ಸಿದ್ದರಾಮಯ್ಯ

ಬೆಂಗಳೂರು, (ಸೆ20): ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲಿಯಲ್ಲಿ ನಡೆಸಿದ ಸರ್ವ ಪಕ್ಷ ಸಭೆ ನಾಯಕರು, ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದರು. 

ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ. ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ, ಗಟ್ಟಿಯಾಗಿ ನಿಲ್ಲಬೇಕು.

ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. 

ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕದ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ.

ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ  CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಏಕೆಂದರೆ ನಮ್ಮಲ್ಲಿ ನೀರೇ ಇಲ್ಲ. ಆದ್ದರಿಂದ ನಮಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.

ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ ಎಂದರು. 

ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವ ಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ.

ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ರಾಜ್ಯಕ್ಕೆ ಎದುರಾಗಿರುವ ಸಂದರ್ಭವನ್ನು ಆರಂಭದಲ್ಲಿ ಸಭೆಗೆ ವಿವರಿಸಿದರು. 

ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯ ಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು. 

ನಮ್ಮ ಅಧಿಕಾರಿಗಳು, ತಜ್ಞರು ಮತ್ತು ಕಾನೂನು ತಂಡ ಸಮರ್ಥವಾಗಿ ವಾಸ್ತವ ಪರಿಸ್ಥಿತಿಯನ್ನು CWMA ನಲ್ಲೂ ಪ್ರಸ್ತುತ ಪಡಿಸಿದ್ದಾರೆ. 

ನಮಗೆ ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವ ನಿಟ್ಟಿನಲ್ಲಿ ಬೇಡಿಕೆ, ಒತ್ತಡಗಳನ್ನು ಮಂಡಿಸಬೇಕು. 

ನಮಗೆ ಸಮಸ್ಯೆ ಬಗೆಹರಿದು ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳುವುದಷ್ಟೆ ಮುಖ್ಯ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ವಿನಂತಿಸಿದರು.

ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!