ದೊಡ್ಡಬಳ್ಳಾಪುರ, (ಸೆ.20): ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಭಗತ್ ಸಿಂಗ್ ಮೈದಾನದಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಕ್ರೀಡಾಕೂಟಕ್ಕೆ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಚಾಲನೆ ನೀಡಿದರು. ಕುರ್ಚಿ, ಶಾಟ್‌ಪುಟ್, ಕ್ರಿಕೆಟ್ ನಡೆಯಿತು. ಅನಂತರ 100 ಮೀ, 200 ಓಟದ ಸ್ಪರ್ಧೆ ಆಯೋಜಿಸಲಾಗಿತ್ತು.
ಸೆಪ್ಟಂಬರ್ 23ರಂದು ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆಯುವ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಇಂದು ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಪೌರಾಯುಕ್ತ ಕೆ.ಪರಮೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಈರಣ್ಣ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ತಿಪ್ಪಣ್ಣ, ಸಿಬ್ಬಂದಿಗಳು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….