ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ: 75 ವರ್ಷಗಳ ಸ್ವಾತಂತ್ರ್ಯ ಭಾರತದ ಅತಿದೊಡ್ಡ ಚುನಾವಣಾ ಅಕ್ರಮವೆಂದು ಆರೋಪ..!!

ಬೆಂಗಳೂರು, (ಸೆ.20): ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಹಾಗೂ ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದರು

ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ರಾಜ್ಯ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿಯೇ ಜಾತಿ ಸಮಾವೇಶ ನಡೆಸಿ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ. ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ರಾಜ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಖಡಕ್ ತನಿಖೆ ನಡೆಸಿ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು. ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ. ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿ ಶೀಘ್ರವೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಷಡ್ಯಂತ್ರ, ಕುತಂತ್ರ, ಕುಯುಕ್ತಿಗಳನ್ನು ಪ್ರಯೋಗ ಮಾಡಲು ಹೊರಟಿದೆ. ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿಷಪ್ರಾಶನ ಮಾಡುವ ಈ ದೇಶದ್ರೋಹಿ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ ಎಂದು ಅವರು ಹೇಳಿದ್ದಾರೆ

ಅಲ್ಲದೆ, ಕಾಂಗ್ರೆಸ್ ಕಪಿಮುಷ್ಟಿಯಿಂದ ಪ್ರಜಾಪ್ರಭುತ್ವ ಹಾಗೂ ಭಾರತವನ್ನು ಉಳಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!