ದೊಡ್ಡಬಳ್ಳಾಪುರ, (ಸೆ.26): ಹಿಂದೂಪುರದಿಂದ ಬೆಂಗಳೂರಿಗೆ ದನದ ಮಾಂಸ ಸಾಗಿಸುತ್ತಿದ್ದರನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರ ಕೆಲಸವನ್ನು ಸಂಘಟನೆಯ ರಾಜ್ಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಶ್ಲಾಘಿಸಿದ್ದಾರೆ.
ಕಾರ್ಯಕರ್ತರ ವಿರುದ್ಧ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿರುವ ಕ್ರಮವನ್ನು ಖಂಡಿಸಿರುವ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ನಿಲ್ಲಿಸಬೇಕು. ಕಾರ್ಯಕರ್ತರ ಮೇಲೆ ದಾಖಲಾಗಿರುವ ಪ್ರಕರಣ ಹಿಂದಕ್ಕೆ ಪಡೆದು, ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
‘ಕಳ್ಳರನ್ನು ಹಿಡಿದು ಕೊಟ್ಟವರ ವಿರುದ್ಧ ಡಕಾಯಿತಿ ಪ್ರಕರಣ ದಾಖಲಿಸಿರುವ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸರಿಗೆ ಗೋವುಗಳ ಶಾಪ ತಟ್ಟಲಿದೆ. ಗೋಮಾಂಸ ಸಾಗಿಸುತ್ತಿದ್ದವರು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದಾಗ ಸಾರ್ವಜನಿಕರು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಪರಾರಿಯಾಗುತ್ತಿದ್ದವರನ್ನು ತಡೆಯದೆ ಪೂಜೆ ಮಾಡಬೇಕಿತ್ತ’ ಮುತಾಲಿಕ್ ಎಂದು ಪ್ರಶ್ನಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….