ಮೈಸೂರು, (ಸೆ.26): ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ನೀರು ಹಂಚಿಕೆ ವಿವಾದ ಶುರುವಾಗಿದೆ. ಆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯದ ಕನ್ನಡಪರ ಸಂಘಟನೆ, ರೈತರ ಪರವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ನಾಯಕರು ಅವರವರ ಹೊಡೆದಾಟದಲ್ಲಿ ಮುಳುಗಿದ್ದಾರೆ. ಅವರು ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿರಬೇಕು. ಸರಿಯಾಗಿ ಕಾವೇರಿ ಕೊಳ್ಳದ ಅಧ್ಯಯನ ಮಾಡದೇ ಇರಬಹುದು, ಈ ಕಾರಣದಿಂದಲೇ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ನ್ಯಾಯಾಲಯಕ್ಕೆ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಕೇವಲ ತಮಿಳುನಾಡು ಕರ್ನಾಟಕಕ್ಕೆ ಅಲ್ಲ, ಬೇರೆ ರಾಜ್ಯದ ಜಲ ವಿವಾದ ಸಹ ಪಿಎಂ ಬಗೆಹರಿಸಬೇಕಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯದ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ ಆಸ್ತಿ ಪಾಸ್ತಿ ಹಾನಿ ಮಾಡಿದರೆ ನಮಗೆ ನಷ್ಟ ಒಮ್ಮೆ ತಮಿಳುನಾಡಿಗೆ ನೀರು ಹರಿಸಿದ ಮೇಲೆ ಅವರಿಗೆ ಹೆಚ್ಚಾದರೂ ವಾಪಸ್ಸು ಪಡೆಯಲು ಸಾಧ್ಯವಿಲ್ಲ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….