ದೇವನಹಳ್ಳಿ, (ಸೆ.26): ರಷ್ಯಾ ಹಾಗೂ ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿಗೆ ಕಾವೇರಿ ವಿವಾದವನ್ನು ಬಗೆಹರಿಸಲು ಆಗುವುದಿಲ್ಲವೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದದ ಬಗೆಹರಿಸಲು ಪ್ರಧಾನಿ ಮೋದಿ ಭೇಟಿಗೆ ಬಿಜೆಪಿ ನಾಯಕರು ಅವಕಾಶ ಕೇಳಲಿ. ಮೋದಿ ಬಳಿ ಹೋಗಿ ಮಾತನಾಡುವುದುನ್ನು ಬಿಟ್ಟು ಬಿಜೆಪಿ ನಾಯಕರು ಏನು ಮಾಡುತ್ತಿದ್ದಾರೆ..? ಸುಮ್ಮನೆ ರಾಜಕೀಯ ಮಾಡುವುದಾದರೇ ನಾವು ಮಾಡುತ್ತೇವೆ ಎಂದು ಹೇಳಿದರು.
ನಾವು ಅವರಿಗೆ ವಿರೋಧ ಪಕ್ಷವೆಂದು ಗೌರವ ಕೊಟ್ಟು ಸರ್ವಪಕ್ಷಗಳ ಸಭೆ ಕರೆದಿದ್ದೆವು. ಈ ವೇಳೆ ಬಿಜೆಪಿ ನಾಯಕರ ಬಳಿ ಮೋದಿ ಭೇಟಿಗೆ ಅವಕಾಶ ಮಾಡಿಕೊಡಲು ಕೇಳಿದ್ದೆವು. ಆದರೆ ಬಿಜೆಪಿ ನಾಯಕರು ಪ್ರಧಾನಿಯನ್ನು ಮಧ್ಯ ತರಬೇಡಿ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದರು. ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ, ಬದಲಿಗೆ ಸರ್ಕಾರದ ಜೊತೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಎಂದರು.
ಇದೇ ವೇಳೆ ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ ನಡೆದಿದ್ದರ ಬಗ್ಗೆ ಪ್ರತಿಕ್ರಿಯಿಸದ ಅವರು, ಸರ್ಕಾರ ಹಾಗೂ ಸಂಘಟನೆ ಜನರು ಎಲ್ಲರೂ ಅಭಿಪ್ರಾಯವೂ ಒಂದೇ ಸರ್ಕಾರದ ಜೊತೆ ಎಲ್ಲರೂ ನಿಂತರೆ ಶಕ್ತಿ ಬರಲಿದೆ. ಸುಪ್ರೀಂಕೋರ್ಟ್ ಬಳಿ ಹನಿ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಹೀಗಿದ್ದ ಮೇಲೆ ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ನಾವೆಲ್ಲರೂ ಸೇರಿ ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಸರ್ಕಾರ ಮೇಲೆ ಒತ್ತಡ ತರೋಣ ಎಂದರು.
ಮತ್ತೆ 3000 ಕ್ಯೂಸೆಕ್ ನೀರು ಬಿಡುಗಡೆಗೆ ಸಿಡಬ್ಲ್ಯೂ ಆರ್‌ಸಿ ಆದೇಶ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು 24,000 ಕ್ಯೂಸೆಕ್ ಕೇಳಿದಾಗ 50,00 ಕ್ಯೂಸೆಕ್ ನೀರು ಬಿಟ್ಟಿದ್ದೇವೆ. ಈಗ ಮತ್ತೆ 3,000 ಕ್ಯೂಸೆಕ್ ಬಿಡಿ ಅಂದ್ರೆ ಹೇಗೆ.? ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….